Advertisement

ಚೌಡೇಶ್ವರಿ ಅಮ್ಮನವರ ಬ್ರಹ್ಮರಥೋತ್ಸವ

12:43 AM Apr 28, 2019 | Lakshmi GovindaRaj |

ಮಹದೇವಪುರ: ಕ್ಷೇತ್ರದ ಮಾರತ್ತಹಳ್ಳಿಯಲ್ಲಿ ಚೌಡೇಶ್ವರಿ ಅಮ್ಮನವರ ಬ್ರಹ್ಮರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವಕ್ಕೆ ದೇವಾಸ್ಥಾನದ ಟ್ರಸ್ಟಿ ಭೂಪಾಲ್‌ರೆಡ್ಡಿ ಚಾಲನೆ ನೀಡಿದರು. ಬ್ರಹ್ಮರಥೋತ್ಸವದ ಅಂಗವಾಗಿ ದೇವರಿಗೆ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

Advertisement

ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ, ಬೆಲ್ಲದಾರತಿ, ಶ್ರೀ ಗಣಪತಿ, ಶ್ರೀ ಆಂಜನೇಯ ಸ್ವಾಮಿ, ಸೋಮೇಶ್ವರ ದೇವರಿಗೆ ದೀಪಾರಾಧನೆ, ಲಿಲಿತ ಸಹಸ್ರನಾಮ, ಕುಂಕುಮಾರ್ಚನೆ, ಉಯ್ನಾಲೆ ಸೇವೆ, ಸಪ್ತಶತಿ ಪಾರಾಯಣ, ಕಲಶಾಭಿಷೇಕ, ಸುವರ್ಣ ಆಭರಣ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.

ಮಾರತ್ತಹಳ್ಳಿಯ ಪ್ರಮುಖ ಬೀದಿಗಳಲ್ಲಿ ಬ್ರಹ್ಮರಥೋತ್ಸವ ಸಾಗಿತು. ಡೊಳ್ಳು ಕುಣಿತ, ತಮಟೆ ವಾದ್ಯ, ಕೀಲು ಕುದುರೆ, ಗೊಂಬೆ ಕುಣಿತ ಸೇರಿ ವಿವಿಧ ಜಾನಪದ ಕಲಾ ತಂಡಗಳ ಪದರ್ಶನ ಗಮನಸೆಳೆಯಿತು.

ಮೂರು ದಿನ ನಡೆಯುವ ಉತ್ಸವದಲ್ಲಿ ಮಾರತ್ತಹಳ್ಳಿ ಸುತ್ತಮುತ್ತಲ ಗ್ರಾಮಗಳ ಭಕ್ತರು ಭಾಗವಹಿಸುತ್ತಾರೆ. ಚೌಡೇಶ್ವರಿ ಅಮ್ಮನವರ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮದಲ್ಲಿ ಸುಖ, ಶಾಂತಿ, ಆರೋಗ್ಯ, ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಪ್ರತಿ ವರ್ಷ ಉತ್ಸವ ನಡೆಸಲಾಗುತ್ತಿದೆ ಎಂದು ದೇವಸ್ಥಾನ ಟ್ರಸ್ಟಿ ಭೂಪಾಲ್‌ರೆಡ್ಡಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next