Advertisement

Nejar Case: ಚೌಗುಲೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

10:14 PM Feb 07, 2024 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆ (39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರ ವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

Advertisement

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ಬುಧವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್‌.ಎಂ. ನದಾಫ್‌ ಹಾಜರಿದ್ದರು.

ಫೆ.9ಕ್ಕೆ ಚಾರ್ಜ್‌ ಶೀಟ್‌ ?
ಫೆ. 9ಕ್ಕೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next