Advertisement

ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ: ಒಂದು ಕೋಟಿ ರೂ.ಗೂ ಹೆಚ್ಚಿನ ದೇಣಿಗೆ

12:33 PM Feb 07, 2021 | Team Udayavani |

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದರು.

ಬಿಜೆಪಿ ಎಲ್ಲರ ಪಕ್ಷ:  ಭಾರತೀಯ ಜನತಾ ಪಕ್ಷವು ಅಲ್ಪಸಂಖ್ಯಾತರ ವಿರುದ್ಧವಿರುವ ಪಕ್ಷ ಎನ್ನುವುದು ಅಕ್ಷರಶಃ ಸುಳ್ಳು. ಅನೇಕ ವರ್ಷಗಳಿಂದ ಇಂಥ ಅಪಪ್ರಚಾರವನ್ನು ನಡೆಸಿಕೊಂಡು ಬರಲಾಗಿದೆ. ಬಿಜೆಪಿಯು ದೇಶದ ಸರ್ವರನ್ನೂ ಒಳಗೊಂಡಿರುವ ಪಕ್ಷ ಎಂದು ಡಿಸಿಎಂ ಹೇಳಿದರು.

ಇದನ್ನೂ ಓದಿ:ಬಂಗಾಳದ ಹಲ್ಡಿಯಾದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಕ್ಕೆ ಮಮತಾ ಗೈರು…?

ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವಂತೆ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಮತ್ತು ಸಬ್‌ ಕಾ ವಿಶ್ವಾಸ್‌’ ಎನ್ನುವುದು ಬಿಜೆಪಿಯ ಮಂತ್ರವಾಗಿದೆ. ಎಲ್ಲರನ್ನೂ ಒಳಗೊಂಡು ದೇಶವನ್ನು ಮುನ್ನಡೆಸುವುದು ಪಕ್ಷದ ಗುರಿಯಾಗಿದೆ. ಕೇಂದ್ರದಲ್ಲಿರಬಹುದು ಅಥವಾ ರಾಜ್ಯದಲ್ಲಿರಬಹುದು ಈ ತತ್ವದಡಿಯಲ್ಲೇ ಆಡಳಿತ ನಡೆಯುತ್ತಿದೆ ಎಂದರು.

Advertisement

ನಾವೆಲ್ಲರೂ ಒಂದೇ: ಕ್ರೈಸ್ತ ಸಮುದಾಯದ ಎಲ್ಲ ಗಣ್ಯರ ಪರವಾಗಿ ಸಭೆಯಲ್ಲಿ ಮಾತನಾಡಿದ ಉದ್ಯಮಿ ರೊನಾಲ್ಡ್‌ ಕೊಲಾಸೋ ಅವರು, “ಕ್ರೈಸ್ತ ಸಮುದಾಯ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. ಹಿಂದಿನಿಂದಲೂ ರಾಜ್ಯ-ದೇಶದ ಪ್ರತಿ ಆಗುಹೋಗುಗಳಿಗೆ ಈ ಸಮುದಾಯ ಸ್ಪಂದಿಸುತ್ತಲೇ ಬಂದಿದೆ. ಶಿಕ್ಷಣ, ಧಾರ್ಮಿಕ, ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತ ಸೇವೆಯಲ್ಲಿ ನಿರತವಾಗಿದೆ” ಎಂದರು.

ಇದೇ ವೇಳೆ ಸಂತ ಜೋಸೇಫ್‌ ವಿಶ್ವವಿದ್ಯಾಲಯ ಸ್ಥಾಪನೆಯ ನಿಟ್ಟಿನಲ್ಲಿ ವಿಧಾನಮಂಡಲದಲ್ಲಿ ವಿಧೇಯಕ ಅಂಗೀಕಾರವಾಗಲು ಶ್ರಮಿಸಿದ ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಕ್ರೈಸ್ತ ಮುಖಂಡರು ಅಭಿನಂದಿಸಿ ಗೌರವಿಸಿದರು.

ಬೆಂಗಳೂರಿನಲ್ಲಿರುವ ಮಾಲ್ಡೀವ್ಸ್‌ ರಾಯಭಾರ ಕಚೇರಿಯ ಕಾನ್ಸುಲ್‌ ಜನರಲ್‌ ಡಾ.ಜೋಸೆಫ್ ವಿ.ಜಿ., ಉದ್ಯಮಿಗಳಾದ ಜೋಸೆಫ್‌ ಫ್ರಾನ್ಸಿಸ್‌, ಸಿ.ಜೆ.ಬಾಬು, ಸಿಲ್ವಿಯಾನ್‌ ನರೋನ, ಕ್ಲ್ಯಾಡ್ಯುಯಸ್‌ ಪೆರಾರಿಯ, ಡಾ.ಥಾಮಸ್‌ ಟಿ. ಜಾನ್‌, ಚಾರ್ಲ್ಸ್‌ ಗೋಮೆಸ್‌, ರೋಶನ್‌ ಡಿಸಿಲ್ವ, ನಿಗೆಲ್‌ ಫರ್ನಾಂಡೀಸ್‌, ಸಂತೋಷ್‌ ಸೀಕ್ವೆರಿಯಾ, ಕ್ಲಾರೆನ್ಸ್‌ ಪೆರಾರಿಯಾ, ಪ್ರಮೋದ್‌ ಡಿಸೋಜ, ಎಂ.ಎಕ್ಸ್,ರಾಜು, ಡಾ.ಕೆ.ಸಿ.ಸ್ಯಾಮ್ಯುಯಲ್‌, ಅರುಣ್‌ ಫರ್ನಾಂಡೀಸ್‌, ಡಾ.ಸಂತೋಷ್‌ ಕೋಶಿ, ಸಮುದಾಯದ ಹಿರಿಯ ಮುಖಂಡ ಪಿ.ಕೆ. ಚೆರಿಯನ್‌, ಸಿ.ಜಿ.ವರ್ಗೀಸ್, ಮನೋಜ್‌ ರಾಜ್‌, ಐವಾನ್‌ ಡಿʼಕೋಸ್ಟಾ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next