Advertisement

ವಿಶ್ವಾದ್ಯಂತ ಸಂಭ್ರಮದ ಕ್ರಿಸ್‌ಮಸ್‌;ರಾಜ್ಯದಲ್ಲೂ ಸಡಗರ,ಶಾಂತಿ ಸಂದೇಶ

03:55 PM Dec 25, 2018 | |

ಬೆಂಗಳೂರು: ವಿಶ್ವಾದ್ಯಂತ ಏಸು ಕ್ರಿಸ್ತ ಜನಿಸಿದ ದಿನವಾದ ಕ್ರಿಸ್‌ಮಸ್‌ ಹಬ್ಬವನ್ನು  ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜ್ಯದಲ್ಲೂ ಸಂಭ್ರಮ ಜೋರಾಗಿದೆ.

Advertisement

ಬೆಂಗಳೂರು, ಮಂಗಳೂರು, ಉಡುಪಿ,ಕಾರವಾರ ಸೇರಿದಂತೆ ರಾಜ್ಯದ ವಿವಿಧೆಡೆ ಚರ್ಚ್‌ಗಳಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿದ್ದು, ಕ್ರೈಸ್ತ ಧರ್ಮೀಯರು ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ.

ಸೋಮವಾರ ಮಧ್ಯರಾತ್ರಿಯಿಂದಲೇ ಕ್ರೈಸ್ತರು ಸಮೀಪದ ಚರ್ಚ್‌ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸ್ನೇಹಿತರು, ಬಂಧು ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.

ಯೇಸುವಿನ ಜನ್ಮ ದಿನದ ಪ್ರಯುಕ್ತ ಚರ್ಚ್‌ಗಳಲ್ಲಿ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದ್ದವು. ಏಸುಕ್ರಿಸ್ತನ ಜನ್ಮ ವೃತ್ತಾಂತವನ್ನು ಗೋದಲಿಯಲ್ಲಿ ಪುಟ್ಟ ಗೊಂಬೆಗಳ ಪ್ರದರ್ಶನದ ಮೂಲಕ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು.

Advertisement

ಹಬ್ಬದ ಅಂಗವಾಗಿ ಚರ್ಚ್‌ಗಳಲ್ಲಿ ವಿಶೇಷ ಸಾಂಸ್ಕೃತಿಕ ಸಮಾರಂಭ, ಉಪನ್ಯಾಸ ಸೇರಿದಂತೆ ಹಲವು ಕಾರ್ಯಕ್ರಮ ಜರುಗಿದವು. ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್‌ ವೇಷಧಾರಿಗಳು ಕ್ರಿಸ್ತನ ಸಂದೇಶಗಳನ್ನು ಬೋಧಿಸಿದರು. ಮಕ್ಕಳಿಗೆ ವಿವಿಧ ಪ್ರಕಾರದ ಸಿಹಿ ತಿನಿಸುಗಳು ಮತ್ತು ಕೊಡುಗೆಗಳನ್ನು ನೀಡಿ ಶುಭ ಹಾರೈಸಿದರು.
ಹಬ್ಬದ ಹಿನ್ನೆಲೆಯಲ್ಲಿ ಧರ್ಮಗುರುಗಳು ಏಸುಕ್ರಿಸ್ತನ ಸಂದೇಶ ಪಠಣ ಮಾಡಿದರು. ಜೀವನದಲ್ಲಿ ಏಸುಕ್ರಿಸ್ತನ ಸಂದೇಶ ಅಳವಡಿಸಿಕೊಳ್ಳುವ ಮೂಲಕ ವಿಶ್ವದಲ್ಲಿ ಶಾಂತಿ, ಸಹಬಾಳ್ವೆ ನೆಲೆಸುವಂತಾಗಬೇಕು ಎಂದು ಕರೆ ನೀಡಿದ್ದಾರೆ.

ಕೇಕ್‌ ಮತ್ತು ಸಿಹಿತಿಂಡಿಗಳನ್ನು ಹಂಚಿಕೊಂಡು ಪರಸ್ಪರ ಶುಭಕೋರಿಕೊಳ್ಳುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next