Advertisement

ಕ್ರಿಸ್‌ಮಸ್‌ಗಿಲ್ಲ ಪ್ರತ್ಯೇಕ ಮಾರ್ಗಸೂಚಿ

11:16 AM Dec 11, 2021 | Team Udayavani |

ಬೆಂಗಳೂರು: ನಗರದಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಯಾವುದೇ ಪ್ರತ್ಯೇಕ ಮಾರ್ಗ ಸೂಚಿ ಇರುವುದಿಲ್ಲ. ಈ ಹಿಂದಿನ ನಿಯಮಗಳೇ ಮುಂದುವರಿಯಲಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಕ್ರಿಸ್‌ಮಸ್‌ ಆಚರಣೆಗೆ ಅವಕಾಶ ನೀಡಲಾಗಿದೆ. ಆದರೆ, ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚರ್ಚ್‌ ಆವರಣ ದಲ್ಲಿ ಜನಸಂದಣಿ ಉಂಟಾಗದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಈಗಾಗಲೇ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ;-ಯುವ ಶಕ್ತಿ ಉತ್ತೇಜನ ಎಲ್ಲರ ಕರ್ತವ್ಯ

ಪ್ರಾರ್ಥನೆ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಎರಡು ಡೋಸ್‌ ಲಸಿಕೆ ಪಡೆದಿರಬೇಕು ಎಂದು ಹೇಳಿದರು. ಈ ಸಂಬಂಧ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿಲ್ಲ ಎಂದು ಪುನರುತ್ಛರಿಸಿದ ಅವರು, ನಗರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು.

ಪ್ರಸ್ತುತ ನಿತ್ಯ 40 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದ್ದು, ಅಗತ್ಯ ಇರುವ ಕಡೆ ಪರೀಕ್ಷೆ ಪ್ರಮಾಣ ಹೆಚ್ಚು ಮಾಡಲಾಗುವುದು. ಜತೆಗೆ ರೋಗ ಲಕ್ಷಣ ಕಂಡು ಬಂದವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಮ್ಮು, ಶೀತ ಸೇರಿದಂತೆ ಮತ್ತಿತರ ರೋಗ ಲಕ್ಷಣಗಳಿದ್ದರೆ, ಕೋವಿಡ್‌ ತಪಾಸಣೆ ನಡೆಸಿಕೊಳ್ಳಬೇಕು. ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ನಡೆಸುವಂತೆ ಇಗಾಗಲೇ ವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next