Advertisement
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ?ಎಂದು ಪ್ರಶ್ನಿಸಿದರು.
Related Articles
Advertisement
ದೇಶದ ವಿವಿಧೆಡೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿರುವುದು ಚಳವಳಿಯ ಗಟ್ಟಿತನವನ್ನು ತೋರಿಸುತ್ತಿದೆ ಎಂದರು.
ಈಗ ರೈತ ಸಂಘ ಸೇರಿದಂತೆ ಹಲವು ಸಂಘಗಳು ಸೇರಿ ದಕ್ಷಿಣ ಭಾರತಕ್ಕೂ ಚಳವಳಿಯನ್ನು ವಿಸ್ತರಿಸುತ್ತಿದ್ದೇವೆ. ಮೊದಲಿಗೆ ರಾಜ್ಯದ ಮೂರು ಕಡೆಗಳಲ್ಲಿ ರೈತರ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ರೈತರ ಉಳಿವಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಉಪ್ಪಿನಂಗಡಿ:ಮಗುಚಿಬಿದ್ದ ಡೀಸೆಲ್ ಟ್ಯಾಂಕರ್; ಬಿಟ್ಟಿ ಡೀಸೆಲ್ ಗೆ ನೂಕುನುಗ್ಗಲು,ಲಾಠಿ ಪ್ರಹಾರ
ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.