ಬೆಂಗಳೂರು: ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಟ್ಯಾಪಿಂಗ್ ಮಾಡಲಾಗಿದೆ ಎಂಬ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
“ನನ್ನ ಅಧಿಕಾರಾವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯವರ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿ ರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ.
ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರನ್ನು ಪ್ರಸ್ತಾಪಿಸಲಾಗಿದೆ. ಸಂಭ ವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿ ಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ’ ಎಂದು ಟ್ವೀಟ್ ಮೂಲಕ ಬೇಸರ ಹೊರಹಾಕಿದ್ದಾರೆ.
ಕೆಲ ಸಮಯದ ಹಿಂದೆ ಗುರುಪೀಠ ಶ್ರೀ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ವರದಿ ಆಘಾತಕಾರಿಯಾಗಿದ್ದು, ಅಂತಹ ಕೆಲಸವನ್ನು ಯಾರೇ ಮಾಡಿರಲಿ. ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ. ದೇವರು, ಗುರುಗಳು ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ.
-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ
ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್‌ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ.
-ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ.