Advertisement
ಉಡುಪಿ: ಜೂ. 8ರಂದು ನಿರ್ಧಾರಬೆಂಗಳೂರು ಪ್ರಾದೇಶಿಕ ಕೇಂದ್ರದಿಂದ ಜೂ. 13ರಿಂದ ಪ್ರಾರ್ಥನೆಗಳನ್ನು ನಡೆಸಬಹುದು ಎಂಬ ಸೂಚನೆ ಬಂದರೂ ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಭಿನ್ನವಾಗಿರುವುದರಿಂದ ಜೂ. 8ರಂದು ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಅಂತಿಮ ನಿರ್ಧಾರವನ್ನು ತಳೆಯಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರು/ಉಡುಪಿ: ಮಸೀದಿಗಳನ್ನು ಜೂ. 8ರಿಂದ ತೆರೆಯಲು ಸರಕಾರ ಅವಕಾಶ ಮಾಡಿಕೊಟ್ಟರೂ ಮುಂದೆ ಮಸೀದಿಗೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗ ಳನ್ನು ಪ್ರಕಟಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್. ಮುಹಮದ್ ಮಸೂದ್ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಅವರು ಈ ವಿಚಾರವನ್ನು ಉದಯವಾಣಿಗೆ ತಿಳಿಸಿದ್ದಾರೆ.
ಝೀನತ್ ಭಕ್ಷ್ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ: ಮಂಗಳೂರು ಬಂದರ್‌ನ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಜಮಾಅತ್ ಖಾನಾದಲ್ಲಿ ಜೂ. 8ರಿಂದ ನಮಾಝ್ ಪ್ರಾಯೋಗಿಕವಾಗಿ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಅಲ್‌ಹಾಜ್ ವೈ. ಅಬ್ದುಲ್ಲ ಕುಂಞಿ ಅವರು ತಿಳಿಸಿದ್ದಾರೆ.