ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಚರ್ಚ್ ಧ್ವಂಸಪ್ರಕರಣ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಇದರಿಂದಾಗಿ ಘಟನೆಗೆ ಸಂಬಂಧಿಸಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ನಾರಾಯಣಪುರದಲ್ಲಿ ಖಾಸಗಿ ಶಾಲೆಯೊಂದರ ಆವರಣದಲ್ಲಿದ್ದ ಚರ್ಚ್‌ನಲ್ಲಿ ಮತಾಂತರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಗುಂಪೊಂದು ಪ್ರತಿಭಟನೆ ನಡೆಸಿತ್ತು.
ಈ ಸಂದರ್ಭದಲ್ಲಿ ಕೆಲವರು ಚರ್ಚ್ ಧ್ವಂಸಕ್ಕೆ ಮುಂದಾಗಿದ್ದಲ್ಲದೆ, ಗುಂಪು ಚದುರಿಸಲು ಬಂದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.