Advertisement
ಪಿಎಸ್‌ಐ ಪ್ರಶ್ನೆ ಪತ್ರಿಕೆಯಲ್ಲಿ ಈ ಮೂವರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ತನಿಖಾಧಿಕಾರಿಗಳು ಇದುವರೆಗೂ ಇವರಿಗೆ ನೋಟಿಸ್ ಕೊಟ್ಟಿಲ್ಲ. ಹೀಗಾಗಿ ಮೂವರಿಗೂ ನೋಟಿಸ್ ಕೊಟ್ಟು ವಿಚಾರಣೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಜತೆಗೆ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲೂ ಅಕ್ರಮ ನಡೆದಿದ್ದು, ಆದರೆ ಸಮರ್ಪಕ ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಕೋರಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ 25 ಮಂದಿ ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆ ನಡೆಸಿದೆ. ಪ್ರತಿಯೊಬ್ಬ ಅಭ್ಯರ್ಥಿಯ ಒಎಂಆರ್ ಶೀಟ್, ಕಾರ್ಬನ್ ಶೀಟ್, ಬ್ಯಾಂಕ್ ಖಾತೆ ವಿವರ ಮತ್ತು ಅವರ ಹಿನ್ನೆಲೆ ಹಾಗೂ ಇತರ ಮಾಹಿತಿ ಸಂಗ್ರಹಿಸಿದ್ದಾರೆ. ಇದುವರೆಗೂ 440 ಮಂದಿ ಅಭ್ಯರ್ಥಿಗಳ ವಿಚಾರಣೆ ನಡೆಸಲಾಗಿದೆ.