Advertisement
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ಅ ಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಪ್ರಕರಣ ಮಂಡ್ಯಕ್ಕೆ ಸೀಮಿತವಾಗಿಲ್ಲ. ಇದು ನಾಲ್ಕೆçದು ಜಿಲ್ಲೆಗಳಿಗೆ ಆವರಿಸಿದೆ ಎಂದರು.
ಮಂಡ್ಯ: ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿದ್ದು, ಸಮಗ್ರ ತನಿಖೆ ನಡೆಸಿ ಇದರ ಮೂಲಪತ್ತೆ ಹಚ್ಚಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು. ಭ್ರೂಣಪತ್ತೆಯ ಕೇಂದ್ರ ಬಿಂದುವಾಗಿರುವ ತಾಲೂಕಿನ ಹಾಡ್ಯ ಗ್ರಾಮದ ಬಳಿ ಇರುವ ಆಲೆಮನೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಉನ್ನತಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಬೇಕು. ಇದರ ಹಿಂದೆ ಇರುವ ಜಾಲವನ್ನು ಭೇದಿಸಬೇಕು. ಆರೋಗ್ಯ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುತ್ತಲಿನ ಪ್ರದೇಶದಲ್ಲಿ ಯಾವ್ಯಾವ ಚಟುವಟಿಕೆ ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
Related Articles
ಮಂಡ್ಯ: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಕರಣದ ತನಿಖೆ ಸಂಬಂಧ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂ ಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಒತ್ತಾಯಿಸಿರುವ ಅವರು, ಸ್ಥಳೀಯ ಅ ಧಿಕಾರಿಗಳ ಸಹಕಾರವಿಲ್ಲದೇ ಈ ಕೃತ್ಯ ನಡೆಯಲು ಸಾಧ್ಯವಿಲ್ಲ. ಗರ್ಭವತಿಯಾದ ಮಹಿಳೆಯರ ಪ್ರಾಥಮಿಕ ಮಾಹಿತಿ ಆಶಾ ಕಾರ್ಯಕರ್ತೆ ಮತ್ತು ತಾಲೂಕು ಅ ಧಿಕಾರಿಗಳಿಗೆ ಇರುವುದಿಲ್ಲವೇ ಎಂದು ಪ್ರಶ್ನಿಸಿ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
Advertisement
ಮೈಸೂರು-ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ಪ್ರಕರಣ ಅತ್ಯಂತ ಹೇಯ, ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ. ಇಂಥ ಹೀನಾಯ ಕೃತ್ಯದಲ್ಲಿ ವೈದ್ಯರು, ಶಾಮೀಲಾದವರು ಯಾರೇ ಇದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಾಗರಿಕ ಸಮಾಜ ತಲೆ ತಗ್ಗಿಸುವಂಥ ಕೃತ್ಯವೆಸಗಿದವರು ಯಾರೇ ಇದ್ದರೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ.-ಎಂ.ಬಿ.ಪಾಟೀಲ, ಕೈಗಾರಿಕಾ ಸಚಿವ ಆರೋಗ್ಯ ಸಚಿವರಿಂದ ಪರಿಶೀಲನೆ
ಮಂಡ್ಯ: ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ 900ಕ್ಕೂ ಹೆಚ್ಚು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆಯಂಥ ಘಟನೆಗಳು ಕ್ರೂರವಾಗಿದ್ದು, ಇಂತಹ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದರು. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಜೊತೆಯಲ್ಲಿ ಕೆಲಸ ಮಾಡಬೇಕು. ಇದಕ್ಕೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಕೆಲಸ ಮಾಡಿಲ್ಲ. ಇದನ್ನು ನೋಡಿದರೆ ಅಧಿಕಾರಿಗಳ ಬೇಜವಾಬ್ದಾರಿ ಕಾಣುತ್ತದೆ. ಈ ಬಗ್ಗೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ವಹಿಸಲು ಹೊಸ ಕಾರ್ಯಕ್ರಮ ರೂಪಿಸುತ್ತೇವೆ. ಈ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಲು ಒತ್ತಾಯಿಸುವುದಾಗಿ ಹೇಳಿದರು.