Advertisement

POCSO case; ಯಡಿಯೂರಪ್ಪ ಅವರಿಗೆ ಸಿಐಡಿ ನೋಟಿಸ್ ಜಾರಿ

04:02 PM Jun 12, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಐಡಿ ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ಬುಧವಾರ ಬಹಿರಂಗಪಡಿಸಿವೆ.

Advertisement

ಫೆಬ್ರವರಿಯಲ್ಲಿ ನಡೆದ ಸಭೆಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ   ಯಡಿಯೂರಪ್ಪಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು, ಈ ಆರೋಪವನ್ನು ಮಾಜಿ ಮುಖ್ಯಮಂತ್ರಿ  ಕಟುವಾಗಿ ನಿರಾಕರಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಇತ್ತೀಚೆಗೆ ದೂರುದಾರರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದರಿಂದ ಪ್ರಕರಣದ ತನಿಖೆ ತೀವ್ರಗೊಂಡಿದೆ. ಯಡಿಯೂರಪ್ಪ ಅವರು ಈ ಆರೋಪವನ್ನು ಕಾನೂನಾತ್ಮಕವಾಗಿ ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next