Advertisement
ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸಕ್ಕರೆ ಕಾರ್ಖಾನೆ ಮೇಲೆ ಬೆಂಗಳೂರಿನಿಂದ ಆಗಮಿಸಿದ್ದ ಸಿಐಡಿ ಅ ಧಿಕಾರಿಗಳ ತಂಡ ದಾಳಿ ನಡೆದಿದ್ದು, ಹಲವು ದಾಖಲೆಗಳ ಪರಿಶೀಲನೆ ನಡೆಸಿದೆ. ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್‌ನಲ್ಲಿ 439 ಕೋಟಿ ರೂ. ಸಾಲ ಪಡೆಯಲಾಗಿತ್ತು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜ.5ರಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಎಂಬುವರಿಂದ ಸೆಕ್ಷನ್ 406, 420 ಅನ್ವಯ ದೂರು ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ ಮಂಗಳವಾರ ಸಿಐಡಿ ಅಧಿಕಾರಿಗಳ ತಂಡ ಕಾರ್ಖಾನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದೆ.
Advertisement
Ramesh Jarkiholi ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಾಳಿ
08:59 PM Feb 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.