ಬೆಂಗಳೂರು: ಬಂಡೀಪುರ, ಕಪ್ಪತಗುಡ್ಡ ಸೇರಿದಂತೆ ಕಳೆದ ಒಂದು ತಿಂಗಳ ಅವಧಿ ಯಲ್ಲಿ ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಅಲ್ಲದೆ, ಬೆಂಕಿ ದುರಂತ ನಡೆದ ಅರಣ್ಯ ಪ್ರದೇಶಗಳ ವ್ಯಾಪ್ತಿಯ ಉಸ್ತುವಾರಿ ನೋಡಿಕೊ ಳ್ಳುತ್ತಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಕುರಿತು ವರದಿ ನೀಡುವಂತೆಯೂ ಇಲಾಖೆ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಿಎಂ, ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದಟಛಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಇತ್ತೀಚೆಗೆ ಬೆಂಕಿ ಅನಾಹುತ ಸಂಭವಿಸಿ ಅರಣ್ಯ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ವನ್ಯ ಜೀವಿಗಳಿಗೆ ಕುಡಿಯುವ ನೀರಿನ ತೊಂದರೆ ಕುರಿತು ಚರ್ಚಿಸಲು ಸೋಮವಾರ ಕರೆದಿದ್ದ ಸಭೆಯಲ್ಲಿ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದಟಛಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿದ್ದ ಅರಣ್ಯ ಸಚಿವ ರಮಾನಾಥ ರೈ ಅವರಿಗೆ ಸೂಚಿಸಿದರು.
ಬೆಂಕಿಯಿಂದ ಅರಣ್ಯ ನಾಶ, ವನ್ಯಜೀವಿಗಳಿಗೆ ತೊಂದರೆ ಯಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಯಾರಿಂದ ಲೋಪವಾಗಿದೆಯೋ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ ಮುಖ್ಯಮಂತ್ರಿಗಳು, ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಿಐಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಎಷ್ಟು ಅಧಿಕಾರಿಗಳು ಕಾಡಿಗೋಗಿದ್ದಾರೆ?: ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡದೆ ಕಾಡಿಗೆ ಹೋಗಿ ಅಲ್ಲಿದ್ದು ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದ ಮುಖ್ಯಮಂತ್ರಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ವರದಿ ಸಲ್ಲಿಸಬೇಕು. ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವ ಅಧಿಕಾರಿ ಎಷ್ಟು ಬಾರಿ ಕಾಡಿಗೆ ಹೋಗಿದ್ದಾರೆ ಎಂಬುದನ್ನು ಆ ವರದಿಯಲ್ಲಿ ದಾಖಲಿಸಬೇಕು ಎಂದು ತಾಕೀತು ಮಾಡಿದರು. ಅರಣ್ಯ ಸಂರಕ್ಷಣೆ ವಿಚಾರದಲ್ಲಿ ಅಧಿಕಾರಿಗಳು ಚೆಲ್ಲಾಟ ವಾಡಿದರೆ ಸಹಿಸಲು ಸಾಧ್ಯವಿಲ್ಲ.
ಕೆಲವೇ ದಿನಗಳ ಅಂತರದಲ್ಲಿ ಬಂಡೀಪುರ, ಕಪ್ಪತಗುಡ್ಡ ಸೇರಿದಂತೆ ಹಲವೆಡೆ ಕಾಡ್ಗಿಚ್ಚು ಕಾಣಿಸಿ ಕೊಂಡು ಸಾವಿರಾರು ಹೆಕ್ಟೇರ್ ಅರಣ್ಯ ಹಾನಿಯಾಗಿದೆ. ಈ ಭಾರೀ ಪ್ರಮಾಣದ ಹಾನಿಗೆ ಯಾರು ಹೊಣೆ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ಹೊಸಮಠ ಎತ್ತಂಗಡಿ
ಬೆಂಗಳೂರು: ರಾಜ್ಯದಲ್ಲಿ ಕಾಡ್ಗಿಚ್ಚು ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಹುದ್ದೆಯಿಂದ ಬಿ.ಜೆ. ಹೊಸಮಠ ಅವರನ್ನು ಎತ್ತಂಗಡಿ ಮಾಡಲಾಗಿದೆ. ಹೊಸಮಠ ಅವರನ್ನು ಅರಣ್ಯ ಅಭಿವೃದಿಟಛಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಅರಣ್ಯ ಅಭಿವೃದಿಟಛಿ ನಿಗಮದ ವ್ಯವಸ್ಥಾಪಕರಾಗಿದ್ದ ಕಿಶನ್ ಸಿಂಗ್ ಸುಗಾರ್ ಅವರನ್ನು ಪಿಸಿಸಿಎಫ್ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ.