Advertisement

ಚಂದ್ರು ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ನಿರ್ಧಾರ: ಸಿಎಂ ಬೊಮ್ಮಾಯಿ

09:19 AM Apr 10, 2022 | Team Udayavani |

ಬೆಂಗಳೂರು: ಸಾಕಷ್ಟು ವಿವಾದಗಳನ್ನು ಹುಟ್ಟು ಹಾಕಿರುವ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ. ಸತ್ಯ ಹೊರಬರಬೇಕು. ಅದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಜೊತೆ ಚರ್ಚೆ ಮಾಡಿದ್ದೇನೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಿದ್ದೇವೆ. ನಿಸ್ಪಕ್ಷವಾದ ತನಿಖೆಯಾಗಲಿ, ಸತ್ಯ ಹೊರಬರಲಿ ಎಂದರು.

ಇದನ್ನೂ ಓದಿ:“ಜಲ ಜೀವನ್‌’ನಿಂದ ದೇಶದ ಸಕಲ ಅಭಿವೃದ್ಧಿಗೆ ಉತ್ತೇಜನ : ಪ್ರಧಾನಿ ಮೋದಿ

ಮೂರು ತಂಡದಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಕಾರ್ಯಕರ್ತರ, ಮುಖಂಡರ ಜೊತೆ ಸಭೆ ಮಾಡುತ್ತೇವೆ. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಜೊತೆಗಿರುತ್ತಾರೆ ಎಂದು ಸಿಎಂ ಹೇಳಿದರು.

ಸತ್ಯ ಹೊರಬರಲಿ: ಆರಗ

Advertisement

ಬೆಂಗಳೂರು ನಗರದ ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ, ಚಂದ್ರಶೇಖರ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು, ರಾಜ್ಯ ಸರಕಾರವು ಸಿಐಡಿ ಗೆ ವಹಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಈ ಕುರಿತು ನಿರ್ಧಾರ ತೆಗೆದುಕೊಂಡಿದ್ದು, ಯುವಕನ ಹತ್ಯೆಗೆ ಸಂಬಂಧಿಸಿದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ, ಸತ್ಯವನ್ನು ಬಯಲಿಗೆ ಎಳೆಯಬೇಕು. ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next