Advertisement
ಮಾನಸಗಂಗೋತ್ರಿ ಆವರಣದಲ್ಲಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಗುರುವಾರ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಿದ್ದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಎಂಬುದು ಇಂದು ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಾವಿರಾರು ವರ್ಷಗಳಿಂದ ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿದೆ. ಅದರ ಭಾಗವಾಗಿ ವೆಬ್ ಸಿರೀಸ್, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ನೀವು ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟುಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡಬೇಕು ಎಂದು ತಿಳಿ ಹೇಳಿದರು.
Related Articles
Advertisement
ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪ ಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಇದ್ದರು.