Advertisement

ಸಿನೆಮಾ ದುರಂತ:ಅಮ್ಮ ,ಮಗಳು ಸಾವು

11:24 PM Mar 29, 2019 | Vishnu Das |

ಬೆಂಗಳೂರು: ಕನ್ನಡದ “ರಣಂ’ ಸಿನೆಮಾ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಕಂಪ್ರಸ್ಡ್ ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ತಾಯಿ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟು, ಮತ್ತೂಂದು ಮಗು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಾಗಲೂರಿನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

Advertisement

ಕಟ್ಟಿಗೆಹಳ್ಳಿಯ ನಿವಾಸಿ ಸುಮೈರಾ (28), ಅವರ ಮಗಳು ಆಯೆರಾ (7) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೂಂದು ಮಗು ಜೈನಬಾ (4) ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸ್ಫೋಟದ ಚೂರುಗಳು ತಗುಲಿದ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಹಸ ದೃಶ್ಯದ ಚಿತ್ರೀಕರಣ ನಡೆಸಲು ಸಕ್ಷಮ ಪ್ರಾಧಿಕಾರಗಳಿಂದ ಚಿತ್ರತಂಡ ಅನುಮತಿ ಪಡೆದಿರಲಿಲ್ಲ. ಜತೆಗೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸದಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ದುರ್ಘ‌ಟನೆ ನಡೆದ ಬಳಿಕ ಚಿತ್ರತಂಡ ಸ್ಥಳದಿಂದ ಪರಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next