Advertisement

ದಾವಣಗೆರೆ ಡಾಲರ್ಸ್ ಕಾಲೋನಿಯಲ್ಲಿ ಸಿನಿಮೀಯ ರೀತಿಯಲ್ಲಿ ಮನೆ ದರೋಡೆ

09:40 AM Jul 21, 2019 | Nagendra Trasi |

ದಾವಣಗೆರೆ:ಇಲ್ಲಿನ ಹೊರವಲಯದ ಶಾಮನೂರ ಬಳಿಯ ಡಾಲರ್ಸ್ ಕಾಲೋನಿಯಲ್ಲಿ ಸಿನಿಮೀಯ ರೀತಿಯಲ್ಲಿ ಆರು ಜನರ ತಂಡವೊಂದು ದರೋಡೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

Advertisement

ಡಾಲರ್ಸ್ ಕಾಲೋನಿಯ ಚಂದ್ರಶೇಖರಪ್ಪ ಎಂಬವರ ಮನೆಗೆ ನುಗ್ಗಿದ ಗ್ಯಾಂಗ್ ಮಾರಕಾಸ್ತ್ರಗಳಿಂದ ಬೆದರಿಸಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.

ಮನೆಯವರ ಮೇಲೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರು ಜನ ದರೋಡೆಕೋರರಿದ್ದು, ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next