Advertisement
ರಾಜ್ಯ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ. ಭೂ ಒತ್ತುವರಿದಾರರ ವಿರುದ್ಧ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಆಗಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿರುವವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದ ಕೋಟ್ಯಂತರ ರೂ. ಮೌಲ್ಯದ ಸಾರ್ವಜನಿಕ ಜಮೀನು ಸರ್ಕಾರದ ಕೈ ತಪ್ಪಿ ಹೋಗಿವೆ ಎಂದು ತಿಳಿಸಿದ್ದಾರೆ.
Related Articles
Advertisement
ನಗರ ಪ್ರದೇಶ, ವಾಣಿಜ್ಯ, ಕೈಗಾರಿಕೆ ಇನ್ನಿತರ ಉದ್ದಿಮೆಗಳಿಗೆ ಅನಧಿಕೃತವಾಗಿ ಸರ್ಕಾರಿ ಜಮೀನು ಬಳಸಿದ್ದರೆ ಒತ್ತುವರಿ ಪ್ರಕರಣ ಎಂದು ಪರಿಗಣಿಸಿ ತೆರವು ಮಾಡ ಬೇಕು. ಜಿಲ್ಲಾಧಿಕಾರಿಗಳು ನಿಗದಿಪಡಿಸುವ ಗಡುವಿನ ಒಳಗೆ ಕ್ರಮ ಕೈಗೊಳ್ಳದ ಅಧಿಕಾರಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನಕಲಿ ದಾಖಲೆ ಆಧಾರದ ಮೇಲೆ ಭೂ ಕಬಳಿಕೆ ಆಗಿದೆ ಎಂದು ಬಂದಿರುವ ದೂರು ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಬೇಕು.
ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಲ್ಲಿ ತಕ್ಷಣ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ನೀಡಿರುವ ಸರ್ಕಾರಿ ಜಮೀನುಗಳನ್ನು ಪ್ರಕರಣವಾರು ಪರಾಮರ್ಶೆ ಮಾಡಿ ಗುತ್ತಿಗೆ ಷರತ್ತು ಪಾಲನೆ ಬಗ್ಗೆ ಗಮನಹರಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.