Advertisement
ಹಾಲಿ ಶಾಸಕರಲ್ಲಿ ಮನೋಹರ್ ತಹಶೀಲ್ದಾರ್ ಹಾಗೂ ಕೆ.ಬಿ. ಕೋಳಿವಾಡ್ ಅವರ ಬದಲಿಗೆ ಪುತ್ರರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಬಾದಾಮಿ ಕ್ಷೇತ್ರದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುವ ಸಾಧ್ಯತೆ ಇರು ವುದರಿಂದ ಚಿಮ್ಮನಕಟ್ಟಿಗೆ ಟಿಕೆಟ್ ತಪ್ಪಬಹುದು ಎಂದು ಹೇಳಲಾಗಿದೆ. ಶ್ರೀರಾಮುಲು ಸ್ಪರ್ಧೆ ಮಾಡಲಿರುವ ಮೊಳ ಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಉಗ್ರಪ್ಪ ಅವರನ್ನು ಕಣ ಕ್ಕಿಳಿಸಲು ತೀರ್ಮಾನಿಸಲಾಗಿದೆ.
ದಿಲ್ಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದ ಬೆನ್ನಲ್ಲೇ ಕೇಂದ್ರ ಚುನಾವಣ ಸಮಿತಿ ಅಧ್ಯಕ್ಷ ಆಸ್ಕರ್ ಫೆರ್ನಾಂಡಿಸ್ ಅವರ ಸಹಿ ಯುಳ್ಳ 130 ಅಭ್ಯರ್ಥಿಗಳ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತತ್‌ಕ್ಷಣ ಈ ಬಗ್ಗೆ ಎಐಸಿಸಿ ಸ್ಪಷ್ಟನೆ ನೀಡಿದ್ದು, “ಇನ್ನೂ ಪಟ್ಟಿ ಅಂತಿಮಗೊಂಡಿಲ್ಲ’ ಎಂದಿದೆ.
Related Articles
Advertisement
ಮಂಡ್ಯ ಟಿಕೆಟ್ ಘೋಷಿಸಲಿ ಮತ್ತೆ ಮಾತನಾಡುವೆಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಂಡ್ಯ ಟಿಕೆಟ್ ಘೋಷಿಸಲಿ. ಆಮೇಲೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಬಳಿ ಮಾತ ನಾಡುವುದಾಗಿ ಶಾಸಕ ಅಂಬರೀಶ್ ತಿಳಿಸಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ನನಗೆ ಯಾರೂ, ಯಾವುದೇ ಎಚ್ಚರಿಕೆ ನೀಡಿಲ್ಲ. ಹೈಕಮಾಂಡ್ ಬಳಿ ಏನೇನು ಚರ್ಚೆಯಾಗುತ್ತದೆಯೋ ಕಾದು ನೋಡೋಣ ಎಂದರು.
ಈಗ ಚುನಾವಣೆ ಸುಲಭವಲ್ಲ. ನನ್ನ ಆರೋಗ್ಯದ ಬಗ್ಗೆ ಚರ್ಚೆ ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಐದು ವರ್ಷಗಳಲ್ಲಿ ಅಮರಾವತಿ ಚಂದ್ರಶೇಖರ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಯಾವುದೇ ಸ್ಥಾನ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಇರುವ ಏಳು ಕ್ಷೇತ್ರಗಳಲ್ಲಿ ಮಂಡ್ಯ, ಮದ್ದೂರು ಮತ್ತು ಕೆ.ಆರ್. ಪೇಟೆ ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಆಗಬೇಕಿದೆ. ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗುರು ತಿಸಲಾಗಿದೆ. ಹೀಗಾಗಿ ಐದು ಕ್ಷೇತ್ರ ಗಳಿಗೆ ಟಿಕೆಟ್ ಕೇಳಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದರು.