Advertisement
ಘಟನೆ ಬಳಿಕ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ (CISF Woman Security Guard) ಕುಲ್ವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆದರೆ ಇದೀಗ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
Related Articles
Advertisement
ಪ್ರಕರಣ ಸಂಬಂಧ ಸೇವೆಯಿಂದ ಅಮಾನತುಗೊಳಿಸಿ, ವಿಶೇಷ ತನಿಖಾದಳ ತಂಡವನ್ನು ರಚಿಸಲಾಗಿತ್ತು. ತನಿಖೆ ನಡೆಸಿದ ಎಸ್ ಐಟಿ ತಂಡ ವರದಿಯನ್ನು ಉನ್ನತ ಅಧಿಕಾರಿಗಳಿಗೆ ಸಲ್ಲಿಕೆ ಮಾಡಿತ್ತು.
ಬೆಂಗಳೂರಿಗೆ ವರ್ಗಾವಣೆ ಮಾಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದ ಬಳಿಕ ಈ ಬಗ್ಗೆ ಸಿಐಎಸ್‌ಎಫ್ ಸ್ಪಷ್ಟನೆ ನೀಡಿದೆ.
ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರು ಇನ್ನೂ ಅಮಾನತುನಲ್ಲಿದ್ದು,, ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ಹೇಳಿರುವುದಾಗಿ ʼಎಎನ್ ಐʼ ಸುದ್ದಿ ಸಂಸ್ಥೆ ವರದಿ ಮಾಡಿದೆ.