ಚೆನ್ನೈ: ತಮಿಳುನಾಡು ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ನಗರಗಳಲ್ಲಿ ಜಲಾವೃತ ಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಸತತ ಮಳೆಯಿಂದಾಗಿ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಅಣೆಕಟ್ಟುಗಳು ತುಂಬಿ ಹರಿಯುತ್ತಿವೆ. ಭಾರತೀಯ ಹವಾಮಾನ ಇಲಾಖೆಯು ರವಿವಾರ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:ಪೊಲಾರ್ಡ್ ರನ್ನು ಕೈಬಿಟ್ಟ ಮುಂಬೈ: ನಾಲ್ವರನ್ನು ತಂಡದಿಂದ ಬಿಡುಗಡೆ ಮಾಡಿದ ಚೆನ್ನೈ
ದಕ್ಷಿಣ ಆಂಧ್ರಪ್ರದೇಶ-ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.