Advertisement
ಜನರೇ ಪ್ರಜಾಪ್ರಭುತ್ವದ ಶಕ್ತಿ. ಪ್ರಜಾಪ್ರಭುತ್ವವೇ ಪರಿಪೂರ್ಣ ಸೂತ್ರ. ಪ್ರಜಾಪ್ರಭುತ್ವದ ತತ್ವಗಳನ್ನು ಅನುಸರಿಸಿ.ಪ್ರಜಾಪ್ರಭುತ್ವವನ್ನು ಬಲಪಡಿಸಲು ಅದರ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ.
Related Articles
Advertisement
ಭಾರತದ ಇಂದಿನ ಪ್ರಜಾಪ್ರಭುತ್ವವನ್ನು ಬಹುಮತದ ಸರ್ಕಾರವೆಂದು ಕರೆಯಲಾಗಿದೆ. ಬಹುಮತ ಗಳಿಸಿದ ಪಕ್ಷ ಸರಕಾರ ರಚಿಸಿದರೂ ಅಲ್ಪಸಂಖ್ಯಾತರಿಗೆ ಹಾಗೂ ರಾಜಕೀಯ ವಿರೋಧಿಗಳಿಗೆ ತೊಂದರೆ, ಅನಾನುಕೂಲತೆಗಳು ಒದಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿರುತ್ತದೆ. ಪರಸ್ಪರ ತಿಳಿವಳಿಕೆ, ವಿಚಾರ ವಿನಿಮಯಗಳು ಪ್ರಜಾಪ್ರಭುತ್ವದ ಮುಖ್ಯ ಲಕ್ಷಣಗಳಾಗಿವೆ.
ಈ ದಿನಾಚರಣೆ ಹಿನ್ನೆಲೆ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007ರಲ್ಲಿ ಈ ದಿನವನ್ನು ಆಚರಿಸಲು ನಿರ್ಣಯವನ್ನು ಅಂಗೀಕರಿಸಿದ ನಂತರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸ್ಥಾಪಿಸಲಾಯಿತು. ಇಂಟ-ಪಾರ್ಲಿಮೆಂಟರಿ ಯೂನಿಯನ್ ಪ್ರಕಾರ, ಈ ನಿರ್ಣಯವು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಬಲಪಡಿಸುವ ಕಡೆಗೆ ಸಜ್ಜಾಗಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು 2008 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು.
ಸೆಪ್ಟಂಬರ್ 15ರ ದಿನಾಂಕ ಏಕೆ?
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ಕಲ್ಪನೆಯು ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯಿಂದ ಹುಟ್ಟಿಕೊಂಡಿದೆ. ಇದನ್ನು ಇಂಟ-ìಪಾರ್ಲಿಮೆಂಟರಿ ಕೌನ್ಸಿಲ್ ತನ್ನ 161 ನೇ ಅಧಿವೇಶನದಲ್ಲಿ ಸೆಪ್ಟೆಂಬರ್ 15, 1997 ರಂದು ಅಂಗೀಕರಿಸಿತು. ಅದಕ್ಕೆ ಇಂದೇ ಆಚರಿಸುತ್ತಾರೆ.
ಅಂದಿನಿಂದ ವಿಶ್ವದಾದ್ಯಂತ ಹಲವಾರು ಸಂಸದೀಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಅದೇ ರೀತಿ ಕರ್ನಾಟಕದಲ್ಲಿ ಬೃಹತ್ ಮಾನವ ಸರಪಳಿಯನ್ನು ರೂಪಿಸಲಾಗುತ್ತಿದೆ.
ಏನಿದು ಬೃಹತ್ ಮಾನವ ಸರಪಳಿ..?
ವಿಶ್ವದ ಅತಿ ಉದ್ದದ ಮಾನವ ಸರಪಳಿಯನ್ನು ರೂಪಿಸುವಲ್ಲಿ ಭಾಗವಹಿಸಲು ನಾಗರಿಕರನ್ನು ಉತ್ತೇ ಜಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ.
ಬನ್ನಿ..ಪ್ರಜಾಪ್ರಭುತ್ವಕ್ಕಾಗಿ ಕೈ ಜೋಡಿಸೋಣ….
ಕರ್ನಾಟಕ ಸರ್ಕಾರವು ನಾಗರಿಕ ಸಮಾಜದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಶೋಭೆ ತರಲು ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಮುಂದಾಳತ್ವ ವಹಿಸುತ್ತಿದೆ. ಪ್ರಜಾಸತ್ತಾತ್ಮಕ ತತ್ವಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಬಗ್ಗೆ ಕರ್ನಾಟಕದ ನಿರಂತರ ಬದ್ಧತೆಯ ಸಂಕೇತವಾಗಿ, ಬೀದರ್ ನಿಂದ ಚಾಮರಾಜನಗರದವರೆಗೆ ಇಡೀ ರಾಜ್ಯದಾದ್ಯಂತ ಬೃಹತ್ ಮಾನವ ಸರಪಳಿಯನ್ನು ಎಲ್ಲ 31 ಜಿಲ್ಲೆಗಳನ್ನು ಒಳಗೊಂಡಿದೆ. ಇದು ಅಂದಾಜು 2,500 ಕಿಮೀ ಉದ್ದವಾಗಿದೆ. ಇದು ವಿಶ್ವದ ಇತಿಹಾಸದಲ್ಲಿ ಅತಿ ಉದ್ದವಾಗಿದೆ. ಪ್ರತಿ ಕಿಲೋಮೀಟರ್ಗೆ ಸರಾಸರಿ 1,000ಕ್ಕೂ ಹೆಚ್ಚು ಜನರು ಒಟ್ಟು 25 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ.
ಅದೆ ರೀತಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಮೂಲಕ ದಿನಾಂಕ 15ರಂದು ಬೃಹತ್ ಮಾನವ ಸರಪಳಿ ನಿರ್ಮಿಸಿ, ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಯಿಂದ ಮುಂಡರಗಿ ತಾಲ್ಲೂಕು ಬಾಗೇವಾಡಿ ಯಿಂದ ಮಾನವ ಸರಪಳಿ ಹಾದುಹೋಗಿ, ಕೊಪ್ಪಳ ಜಿಲ್ಲೆಗೆ ಸಾಗುತ್ತದೆ ಎಂದು ಮಾಹಿತಿ ಬಂದಿದೆ.
ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸ್ವಾತಂತ್ರÂ,ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆಯನ್ನು ಒತ್ತಿಹೇಳುವ ಪ್ರಜಾಪ್ರಭುತ್ವದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಪ್ರದರ್ಶಿಸುತ್ತಾರೆ.ನಮ್ಮ ಪರಿಸರವನ್ನು ರಕ್ಷಿಸುವಂತಹ ನಮ್ಮ ಮೂಲಭೂತ ಕರ್ತವ್ಯಗಳನ್ನು ನೆನಪಿಸುತ್ತಾರೆ. ಈ ಸಂದರ್ಭದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಂದ ರಾಜ್ಯಾದ್ಯಂತ ಹತ್ತು ಲಕ್ಷ ಸಸಿಗಳನ್ನು ನೆಡಲು ಯೋಜಿಸಲಾಗಿದೆ.ಒಟ್ಟಾರೆಯಾಗಿ ಪ್ರಜಾಪ್ರಭುತ್ವ ಒಂದು ಜೀವನ ವಿಧಾನವೇ ಆಗಿದೆ. ಆರ್ಥಿಕ, ಸಾಮಾಜಿಕ, ಸಮಾನತೆ ಹಾಗೂ ರಾಜಕೀಯ ಸ್ವಾತಂತ್ರ್ಯ ಒದಗಿಸಿಕೊಡಲು ಅದು ಹೋರಾಡುತ್ತದೆ. ನಾಗರಿಕರಲ್ಲಿ ಪರಸ್ಪರ ತಿಳಿವಳಿಕೆ, ವಿಚಾರ ವಿನಿಮಯ, ಸಹಕಾರ, ಸಹಾನುಭೂತಿ, ರಚನಾತ್ಮಕ ವಿಮರ್ಶೆ ಕುರಿತು ಪ್ರಜಾಪ್ರಭುತ್ವವು ತಿಳಿಸುತ್ತದೆ ಎಂದು ಹೇಳಿದರೆ ತಪ್ಪಾಗಲಾರದು.
–ಬಸವರಾಜ ಎಂ. ಯರಗುಪ್ಪಿ
ಗದಗ