Advertisement

ಪ್ರಧಾನಿ ಫೋಟೋ ಬೇಡ ಎನ್ನುವುದು ಮೂಲಭೂತ ಹಕ್ಕಲ್ಲ: ಕೇರಳ ಹೈಕೋರ್ಟ್‌

09:02 PM Feb 05, 2022 | Team Udayavani |

ತಿರುವನಂತಪುರಂ: ಕೊರೊನಾ ಲಸಿಕೆಯ ಪ್ರಮಾಣಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದುಹಾಕಿ ಎಂದು ಕೇಳುವುದು ಮೂಲಭೂತ ಹಕ್ಕಲ್ಲ ಎಂದು ಕೇರಳ ಹೈಕೋರ್ಟ್‌ ಹೇಳಿದೆ.

Advertisement

ಹಣ ಕೊಟ್ಟು ಲಸಿಕೆ ಪಡೆದವರ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋ ಖಂಡಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ:ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ

ಅದರ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಸ್‌.ಮಣಿಕುಮಾರ್‌ ಹಾಗೂ ನ್ಯಾಯಮೂರ್ತಿಗಳಾದ ಶಾಜಿ ಪಿ.ಚಾಲಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next