Advertisement

ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ: ಗೃಹ ಸಚಿವಾಲಯ

09:55 AM Dec 20, 2019 | Team Udayavani |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು  ನಡೆಯುತ್ತಿರುವ ಹಿನ್ನಲೆಯಲ್ಲಿ “ ಈ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ. ಅದರಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆಂದು ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟ ಪಡಿಸಿದ್ದಾರೆ .

Advertisement

ಟ್ವಿಟರ್‌ ನಲ್ಲಿ ಭಾರತದಲ್ಲಿನ ಪೌರತ್ವ ತಿದ್ದುಪಡಿ  ಕಾಯ್ದೆಗೆ  ಸಂಬಂಧಿಸಿದ ನಿಬಂಧನೆಗಳು ಮತ್ತು ಕಾಯ್ದೆಯ ವಸ್ತುಸ್ಥಿತಿಯ ಕುರಿತು ಗೃಹಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.

ಜನನ, ಮೂಲ, ನೋಂದಣಿ, ನೈಸರ್ಗಿಕೀಕರಣ ಅಥವಾ ಭೂಪ್ರದೇಶದ ಸಂಯೋಜನೆಯಿಂದ ಭಾರತದ ಪೌರತ್ವವನ್ನು ಪಡೆಯಬಹುದು. ಅರ್ಹತೆ ಪಡೆದ ಯಾವುದೇ ವಿದೇಶಿಯನು ತನ್ನ ದೇಶ ಅಥವಾ ಸಮುದಾಯವನ್ನು ಲೆಕ್ಕಿಸದೆ ನೋಂದಣಿ ಅಥವಾ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವ ತಿದ್ದುಪಡಿ ಕಾಯ್ದೆ ಮೂರು ದೇಶಗಳ ಆರು ಅಲ್ಪಸಂಖ್ಯಾತ ಸಮುದಾಯಗಳ ವಿದೇಶಿಯರಿಗೆ ಧಾರ್ಮಿಕ ಕಿರುಕುಳದ ಆಧಾರದ ಮೇಲೆ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ ”ಎಂದು ವಕ್ತಾರರು ಹೇಳಿದ್ದಾರೆ.

ಪ್ರಸ್ತುತ ಭಾರತದಲ್ಲಿ  ಅಸ್ತಿತ್ವದಲ್ಲಿರುವ ಯಾವುದೇ ಕಾನೂನು ನಿಬಂಧನೆಯನ್ನು ತಿದ್ದುಪಡಿ ಮಾಡುವುದಿಲ್ಲ . ಆದುದರಿಂದ ಸಿಎಎ ಭಾರತೀಯ ನಾಗರಿಕರಿಗೆ ಅನ್ವಯಿಸುವುದಿಲ್ಲ. ಅವರು ಅದರಿಂದ ಸಂಪೂರ್ಣವಾಗಿ ಮುಕ್ತವಾಗಿದ್ದಾರೆ” ಎಂದು ಗೃಹಸಚಿವಾಲಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next