Advertisement
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಾಗಲೇ ದೇಶಾದ್ಯಂತ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ನಡುವೆಯೂ ಕೇಂದ್ರ ಸರಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಚುನಾವಣೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ಮೆಣಸಿನಕಾಯಿ ದರ 20 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಒಂದೇ ದಿನದಲ್ಲಿ ಕುಸಿತವಾಗಿದೆ. ಇದರಿಂದ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ. ಈ ರೀತಿಯ ದರ ಕುಸಿತ ಎಲ್ಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗಿದೆಯಾ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರ ಆಗಿದೆಯಾ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಡಾ| ಜಿ. ಪರಮೇಶ್ವರ್ ತಿಳಿಸಿದರು.
Related Articles
Advertisement