Advertisement

Citizenship Amendment Act ಅಧಿಸೂಚನೆ ರಾಜಕೀಯ ನಿರ್ಧಾರ: ಜಿ. ಪರಮೇಶ್ವರ್‌

11:40 PM Mar 11, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣ ದೃಷ್ಟಿಯಿಂದ ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ರಾಜಕೀಯ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಆರೋಪಿಸಿದರು.

Advertisement

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಾಗಲೇ ದೇಶಾದ್ಯಂತ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ನಡುವೆಯೂ ಕೇಂದ್ರ ಸರಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಚುನಾವಣೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

ಈ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಆತಂಕ ಬಿಜೆಪಿಯವರನ್ನು ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ವರದಿ ಆಧರಿಸಿ ಕ್ರಮ : ಪರಮೇಶ್ವರ್‌
ಮೆಣಸಿನಕಾಯಿ ದರ 20 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಒಂದೇ ದಿನದಲ್ಲಿ ಕುಸಿತವಾಗಿದೆ. ಇದರಿಂದ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ. ಈ ರೀತಿಯ ದರ ಕುಸಿತ ಎಲ್ಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗಿದೆಯಾ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರ ಆಗಿದೆಯಾ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಡಾ| ಜಿ. ಪರಮೇಶ್ವರ್‌ ತಿಳಿಸಿದರು.

ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೊಪಕರಣ ಧ್ವಂಸ ಮಾಡಲಾಗಿದೆ. ಒಂದೇ ದಿನದಲ್ಲಿ 12 ಸಾವಿರ ರೂ. ದರ ಕುಸಿಯಲು ಏನು ಕಾರಣವೇನೆಂದು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next