Advertisement

CAA; ಲೋಕಸಭೆ ಚುನಾವಣೆಗೆ ಮುನ್ನ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ: ಅಮಿತ್ ಶಾ

02:15 PM Feb 10, 2024 | Team Udayavani |

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯನ್ನು ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು.

Advertisement

ಇಟಿನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ” ಸಿಎಎ ವಿರುದ್ಧ ನಮ್ಮ ಮುಸ್ಲಿಂ ಸಹೋದರರನ್ನು ದಾರಿ ತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ,” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಶಾ ಅವರು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ ಎಂದು ಹೇಳಿದರು.

“ಆದರೆ ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 370 ಸ್ಥಾನಗಳನ್ನು ಮತ್ತು ಎನ್ ಡಿಎ ಮೈತ್ರಿಕೂಟವು 400ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಅಧಿಕಾರ ಪಡೆಯಲಿದೆ ಎಂದರು.

Advertisement

ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ರಹಸ್ಯ ಉಳಿದಿಲ್ಲ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಹ ತಾವು ಮತ್ತೆ ವಿರೋಧ ಪಕ್ಷದ ಬೆಂಚ್‌ ಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅರಿತುಕೊಂಡಿವೆ ಎಂದು ಅಮಿತ್ ಶಾ ಪ್ರತಿಪಾದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next