Advertisement
ಮೂವ್‌ಮೆಂಟ್ ಬೆಂಗಳೂರು ಹೆಸರಿನ ಸಂಘಟನೆ, ಸಂಜೆ 5 ಗಂಟೆಗೆ ಪುರಭವನ ಮುಂಭಾಗ “ಬೀಫ್ ಫೆಸ್ಟ್’ (ಸಾರ್ವಜನಿಕವಾಗಿ ಗೋ ಮಾಂಸ ಸೇವನೆ ಉತ್ಸವ) ಆಯೋಜಿಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿತ್ತು. ಆದರೆ, ಕೇರಳದಲ್ಲಿ ಇಂಥದ್ದೇ ಘಟನೆ ನಡೆದು ವಿವಾದದ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರ ಪೊಲೀಸರು, ಬೀಫ್ ಉತ್ಸವಕ್ಕೆ ಅವಕಾಶ ನೀಡುವುದಿಲ್ಲ ಎಂದು ಟ್ವಿಟ್ಟರ್ ಮೂಲಕವೇ ಸಂದೇಶ ರವಾನಿಸಿದರು. ಕೇಂದ್ರ ವಲಯ ಡಿಸಿಪಿ ಚಂದ್ರ ಗುಪ್ತ ಈ ಬಗ್ಗೆ ಸ್ಪಷ್ಟನೆಯನ್ನೂ ನೀಡಿದರು.
Related Articles
ಗೋ ಹತ್ಯೆ ನಿಷೇಧ ವಿರೋಧಿಸಿ ಕೆಲವು ಸಂಘಟನೆಗಳು ಸೋಮವಾರ ಸಂಜೆ ನಗರದ ಪುರಭವನದ ಬಳಿ ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕಾರರ ನಡುವೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಕೇರಳ ಮೂಲದ ಕೆಲ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ಸ್ಥಳದ ಬಳಿ ನಿಂತಿದ್ದ ವಾಹನಗಳಲ್ಲಿ ಈ ವ್ಯಕ್ತಿಗಳು ಇದ್ದರು ಎಂದು ಹೇಳಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಪುರಭವನ ಸುತ್ತಮುತ್ತ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
Advertisement
ಬೀಫ್ ಫೆಸ್ಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ನಮ್ಮ ಗಮನಕ್ಕೆ ಬಂದ ಕೂಡಲೆ ಅದೇ ಸಾಮಾಜಿಕ ಜಾಲತಾಣದಲ್ಲೇ ಸ್ಪಷ್ಟನೆ ನೀಡಿದ್ದೇವೆ. ಆಯೋಜನೆ ಕುರಿತು ನಮಗೆ ಯಾವುದೇ ಮನವಿ ಬಂದಿಲ್ಲ. ಟೌನ್‌ಹಾಲ್ ಎದುರು ಯಾವುದೇ ಕಾರ್ಯಕ್ರಮಕ್ಕೂ ನಾವು ಅವಕಾಶ ಕೊಟ್ಟಿಲ್ಲ.-ಚಂದ್ರ ಗುಪ್ತಾ, ಡಿಸಿಪಿ ಕೇಂದ್ರ ವಿಭಾಗ