Advertisement
ಸ್ಮಾರ್ಟ್ ಸಿಟಿಯಾಗಿ ಮಂಗಳೂರು ನಗರ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ಕರಾವಳಿಗೆ ಆಗಮಿಸುವ ಪ್ರವಾಸಿಗರು ಕೂಡ ಹೆಚ್ಚುತ್ತಿದ್ದಾರೆ. ಅದರಲ್ಲಿಯೂ ವಿದೇಶಿ ಪ್ರವಾಸಿಗರ ಫೆವರೆಟ್ ತಾಣವಾಗಿ ಮಂಗಳೂರು ಮಾರ್ಪಾಡಾಗುತ್ತಿದೆ. ಇದಕ್ಕೆ ತಕ್ಕಂತೆ ಪ್ರವಾಸಿಗರನ್ನು ಸೆಳೆಯಲು ಬೀಚ್ ಉತ್ಸವ, ನದಿ ಉತ್ಸವ, ಸರ್ಫಿಂಗ್, ಅಂತಾರಾಷ್ಟ್ರೀಯ ಗಾಳಿಪಟ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.
Related Articles
Advertisement
2016ರ ಎ. 17ರಂದು ಪಿಲಿಕುಳ ಡಾ| ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ. ದೇಶಪಾಂಡೆ ಅವರು ಕೆಎಸ್‌ಟಿಡಿಸಿ ಬಸ್‌ಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ಪ್ರವಾಸಿಗರಿಂದ ಉತ್ತಮ ಸ್ಪಂದನೆ ಇತ್ತು. ಮಳೆಗಾಲ ಕೊನೆಗೊಳ್ಳುವುದರಲ್ಲಿ ಬಸ್‌ನ ಕೆಲವೊಂದು ಬಿಡಿ ಭಾಗಗಳು ಹದಗೆಟ್ಟಿತ್ತು. ಕೆಲವು ದಿನಗಳ ಬಳಿಕ ಈ ಬಸ್ ಅನ್ನು ಬೆಂಗಳೂರಿಗೆ ಸಾಗಿಸಲಾಗಿತ್ತು. ಅದಾದ ಬಳಿಕ ಟೂರಿಂಗ್ ಬಸ್ ಮಂಗಳೂರಿನಲ್ಲಿ ಓಡಲಿಲ್ಲ.
ಈ ಹಿಂದೆ ಇದ್ದಂತಹ ಕೆಎಸ್‌ಟಿಡಿಎಂಸಿ ಪ್ರವಾಸಿ ಬಸ್ ಲಾಲ್ಬಾಗ್‌ನಿಂದ ಹೊರಟು ಕುದ್ರೋಳಿ, ಕದ್ರಿ, ಮಂಗಳಾದೇವಿ ದೇವಸ್ಥಾನ, ಸಂತ ಅಲೋಶಿಯಸ್ ಚಾಪೆಲ್, ಪಿಲಿಕುಳ ನಿಸರ್ಗಧಾಮ, ಜೈವಿಕ ಉದ್ಯಾನವನ, ತಣ್ಣೀರುಬಾವಿ ಟ್ರೀಪಾರ್ಕ್, ಕಡಲತೀರದಿಂದ ಲಾಲ್ಬಾಗ್‌ಗೆ ತೆರಳುತ್ತಿತ್ತು. ಕನಿಷ್ಠ 10 ಮಂದಿ ಬಸ್‌ನಲ್ಲಿರಬೇಕು ಎಂಬ ಷರತ್ತು ಇತ್ತು. ವಯಸ್ಕರಿಗೆ 190 ರೂ. ಮತ್ತು ವಿದ್ಯಾರ್ಥಿಗಳಿಗೆ ಶೇ. 10 ರಿಯಾಯಿತಿ ನೀಡಲಾಗಿತ್ತು.
ಸರಕಾರದ ಗಮನ ಸೆಳೆಯಲಾಗುವುದು
ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ದೇಶ ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಓಡಾಟ ನಿಲ್ಲಿಸಿದ್ದ ಕೆಎಸ್‌ಟಿಡಿಸಿಯ ಸಿಟಿ ಟೂರ್ ಬಸ್ ಪುನರಾರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗಮನ ಸೆಳೆಯಲಾಗುವುದು.
– ವೇದವ್ಯಾಸ ಕಾಮತ್, ಶಾಸಕ
ಎಂಟು ಪ್ರವಾಸಿ ತಾಣ ವೀಕ್ಷಣೆ
ಈ ಹಿಂದೆ ಇದ್ದಂತಹ ಕೆಎಸ್‌ಟಿಡಿಎಂಸಿ ಪ್ರವಾಸಿ ಬಸ್ ಲಾಲ್ಬಾಗ್‌ನಿಂದ ಹೊರಟು ಕುದ್ರೋಳಿ, ಕದ್ರಿ, ಮಂಗಳಾದೇವಿ ದೇವಸ್ಥಾನ, ಸಂತ ಅಲೋಶಿಯಸ್ ಚಾಪೆಲ್, ಪಿಲಿಕುಳ ನಿಸರ್ಗಧಾಮ, ಜೈವಿಕ ಉದ್ಯಾನವನ, ತಣ್ಣೀರುಬಾವಿ ಟ್ರೀಪಾರ್ಕ್, ಕಡಲತೀರದಿಂದ ಲಾಲ್ಬಾಗ್‌ಗೆ ತೆರಳುತ್ತಿತ್ತು. ಕನಿಷ್ಠ 10 ಮಂದಿ ಬಸ್‌ನಲ್ಲಿರಬೇಕು ಎಂಬ ಷರತ್ತು ಇತ್ತು. ವಯಸ್ಕರಿಗೆ 190 ರೂ. ಮತ್ತು ವಿದ್ಯಾರ್ಥಿಗಳಿಗೆ ಶೇ. 10 ರಿಯಾಯಿತಿ ನೀಡಲಾಗಿತ್ತು.
ಅಧಿಕಾರಿಗಳ ಗಮನಕ್ಕೆ ತರಲಾಗುವುದು
ಕೆಎಸ್‌ಟಿಡಿಸಿ ಟೂರಿಂಗ್ ಬಸ್ ಕೆಲವು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಓಡುತ್ತಿತ್ತು. ಪ್ರವಾಸಿಗರ ಸಂಖ್ಯೆ ಕಡಿಮೆ ಇದ್ದ ಕಾರಣ ನಿಲ್ಲಿಸಲಾಯಿತು. ಪುನರಾರಂಭಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋ ದ್ಯಮ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.
– ಸುಧೀರ್ ಗೌಡ, ಪ್ರವಾಸೋದ್ಯಮ ಇಲಾಖೆ ಸಮಾಲೋಚಕ
•ನವೀನ್ ಭಟ್ ಇಳಂತಿಲ