Advertisement

Election ಪೌರ ಚುನಾವಣೆ: ನಾಳೆ ಜೆಡಿಎಸ್‌ ಸಭೆ; ಎಚ್‌ಡಿಕೆ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ

08:39 PM Aug 16, 2024 | Team Udayavani |

ಬೆಂಗಳೂರು: ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್‌ಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಚುನಾವಣೆಗೆ ಸಿದ್ಧತೆ, ಪಕ್ಷದ ಸದಸ್ಯತ್ವ ಅಭಿಯಾನ, ಪಕ್ಷದ ಸಂಘಟನೆ ಮತ್ತು ಪಕ್ಷದ ಆಂತರಿಕ ಚುನಾವಣೆಯ ಬಗ್ಗೆ ಚರ್ಚಿಸಲು ಆ. 18ರ ರವಿವಾರ ಜೆಡಿಎಸ್‌ನ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಹಿರಿಯ ಮುಖಂಡರ ಸಭೆ ಕರೆಯಲಾಗಿದೆ.

Advertisement

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾ ಪ್ರಧಾನ ಕಾರ್ಯದರ್ಶಿಗಳು, ತಾಲೂಕು ಅಧ್ಯಕ್ಷರು, ರಾಜ್ಯ ಕೋರ್‌ ಕಮಿಟಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಾಜ್ಯ ಪದಾಧಿಕಾರಿಗಳು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರನ್ನು ಆಹ್ವಾನಿಸಲಾಗಿದೆ.

ಬಿಜೆಪಿ ಜತೆಗಿನ ಲೋಕಸಭಾ ಚುನಾವಣ ಮೈತ್ರಿ ಜೆಡಿಎಸ್‌ಗೆ ಉತ್ತಮ ಫ‌ಲ ನೀಡಿರುವ ಹಿನ್ನೆಲೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿನ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಒಟ್ಟಾಗಿ ಸ್ಪರ್ಧಿಸುವುದರ ಹಿಂದಿನ ಸಾಧಕ-ಬಾಧಕಗಳ ಬಗ್ಗೆ ವಿಚಾರ ಮಂಥನ ನಡೆಯಲಿದೆ. ಇದರ ಜತೆಗೆ ಕುಮಾರಸ್ವಾಮಿ ತೆರವು ಮಾಡಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮೈತ್ರಿ ಕೂಟದ ಅಭ್ಯರ್ಥಿ ಯಾರು ಆಗಬಹುದು ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ. ಆದರೆ, ಚನ್ನಪಟ್ಟಣದ ಬಗ್ಗೆ ಕುಮಾರಸ್ವಾಮಿಯವರೇ ಪಕ್ಷದ ವತಿಯಿಂದ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next