Advertisement
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಂಜಿನಿಯರ್‌ಗಳ ಬಡ್ತಿ ಕಾರ್ಯ ನಮ್ಮ ಸರ್ಕಾರ ಮಾಡಿದೆ. ಇದರಿಂದ ಕಿರಿಯಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಈ ಕೊರತೆ ನೀಗಿಸಲು 700 ಜನ ಪದವಿ ಎಂಜನಿಯರ್‌ಗಳು, 300 ಜನ ಡಿಪ್ಲೋಮಾ ಪೂರ್ಣಗೊಳಿಸಿದ ಎಂಜಿನಿಯರ್‌ಗಳನ್ನು ಒಂದು ವರ್ಷದ ಅವಧಿಗೆ ತರಬೇತಿ ಎಂಜಿನಿಯರ್‌ಗಳೆಂದು ನೇಮಕ ಮಾಡಲಾಗುವುದು. ಅವರಿಗೆ ಸರ್ಕಾರ ಒಂದು ವರ್ಷದ ಅವಧಿಗೆ ಸೂಕ್ತ ಗೌರವಧನ ನೀಡಲಿದೆ. ಈ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.
ರಾಜ್ಯದ 18 ಸಾವಿರ ಕಿ.ಮೀ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ, 10 ಸಾವಿರ ಕಿ.ಮೀ ಜಿಲ್ಲಾ ಮುಖ್ಯ ರಸ್ತೆಗಳನ್ನು ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಕುರಿತು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ರಸ್ತೆಗಳ ಸಮಗ್ರ ಮಾಹಿತಿ ವರದಿ ತರಿಸಲಾಗುತ್ತಿದೆ. ಈ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದರಿಂದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ರಾಜ್ಯದ ಗ್ರಾಮೀಣ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲ್ದರ್ಜೆಗೇರಿಸುವ ಕಾರ್ಯ ಕಳೆದ 10 ವರ್ಷಗಳಿಂದ ನಡೆದಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಈ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.