ಶ್ರೀನಗರ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಸಾವಿಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ರವಿವಾರ ಸಂಭವಿಸಿದ್ದು, ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ.
ಘಟನೆಯಿಂದ ಆಕ್ರೋಶಿತರಾಗಿರುವ ಸ್ಥಳೀಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪೊಲೀಸರು ಮತ್ತು ಸಿಆರ್ಪಿಎಫ್ ಸಿಬಂದಿ ಜಂಟಿಯಾಗಿ ಪುಲ್ವಾಮಾ – ಶೋಪಿಯಾನ್ ಗಡಿಭಾಗದಲ್ಲಿ ಗಸ್ತು ನಿರತರಾಗಿದ್ದಾಗ ಅವರ ಮೇಲೆ ಉಗ್ರರು ಗುಂಡು ಹಾರಿಸಿದರು.
ಪ್ರತಿಯಾಗಿ ಭದ್ರತಾ ಪಡೆಗಳೂ ಗುಂಡು ಹಾರಿಸಿದ್ದು, ಈ ಸಂದರ್ಭ ಶೋಯಬ್ ಅಹಮದ್ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.