Advertisement
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ಬುಧವಾರ ನಡೆದ ಕೊಲಿಜಿಯಂ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕನ್ನಡಿಗರೇ ಆದ ಪಿ.ಎಸ್. ದಿನೇಶ್ ಕುಮಾರ್ ಅವರ ಸೇವಾವಧಿ ಫೆ. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ನ್ಯಾ| ಎನ್.ವಿ. ಅಂಜಾರಿಯಾ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಹಾಲಿ ಮುಖ್ಯ ನ್ಯಾಯಮೂರ್ತಿ ಅವರ ಸೇವಾವಧಿ ಕೊನೆಗೊಂಡ ಅನಂತರ ನೂತನ ಮುಖ್ಯ ನ್ಯಾಯಮೂರ್ತಿಗಳು ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.1965ರ ಮಾ. 23ರಂದು ಅಹಮದಾಬಾದ್ನಲ್ಲಿ ಜನಿಸಿದ ಅಂಜಾರಿಯಾ 1988ರಲ್ಲಿ ಎ.ಎ. ಶಾ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪಡೆದರು. 2011ರ ನ. 21ರಿಂದ ಎನ್.ವಿ. ಅಂಜಾರಿಯಾ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.