Advertisement

ಸಿಜೆಐ, ರಾಜ್ಯಪಾಲರ ಕಚೇರಿ ಆರ್‌ಟಿಐ ವ್ಯಾಪ್ತಿಗಿಲ್ಲ

09:25 AM Aug 03, 2017 | Team Udayavani |

ಹೊಸದಿಲ್ಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ರಾಜ್ಯಪಾಲರು ಆರ್‌ಟಿಐ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ಸರಕಾರದ ವಿವಿಧ ಇಲಾಖೆಗಳಿಂದ ನಿಗದಿತ ಸಮಯದಲ್ಲಿ ಮಾಹಿತಿ ಪಡೆಯುವ ಉದ್ದೇಶದಿಂದ ಇದನ್ನು ಜಾರಿಗೆ ತಂದಿದ್ದರೂ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಪಾಲರ ಕಚೇರಿಯನ್ನು ಈ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಸಿಬಂದಿ ಖಾತೆ ಸಹಾಯಕ ಸಚಿವ ಜೀತೆಂದ್ರ ಸಿಂಗ್‌ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next