ಬೆಂಗಳೂರು: ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಉದ್ದೇಶವನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ,ಕಾಂಗ್ರೆಸ್ ಹೋರಾಡುತ್ತಿರುವುದು ಬೆಲೆ ಇಳಿಸಲಿಕ್ಕಾಗಿಯೋ ಅಥವಾ ಪೆಟ್ರೋಲ್-ಡೀಸೆಲ್ ಅನ್ನು ಸರಕು ಸೇವಾ ತೆರಿಗೆ (ಜಿಎಸ್ಟಿ)ಗೆಸೇರಿಸಲಿಕ್ಕಾಗಿಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪೆಟ್ರೋಲ್- ಡೀಸೆಲ್ ಅನ್ನು ಜಿಎಸ್ಟಿ ಅಡಿ ತಂದಾಗ ಮಾತ್ರ ತೈಲ ಬೆಲೆ ಇಳಿಕೆಗೆಸಾಧ್ಯ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ತೈಲ ಬೆಲೆಏರಿಕೆ ವಿರುದ್ಧ ದೇಶಾದ್ಯಂತ ಹೋರಾಟ ನಡೆಸಿರುವಕಾಂಗ್ರೆಸ್ ಕೂಡ ಅದನ್ನು ಜಿಎಸ್ಟಿಗೆ ಸೇರಿಸಬೇಕು ಎಂದುಪ್ರತಿಪಾದಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನಹೋರಾಟದ ಮೂಲ ಉದ್ದೇಶವನ್ನು ಸ್ಪಷ್ಟಪಡಿಸಬೇಕುಎಂದು ಆಗ್ರಹಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ,ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂಆಗಿರುವ ನಾಯಕರೊಬ್ಬರು ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸಬೇಕು ಎಂದುಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ, ಪೆಟ್ರೋಲ್ ಮೇಲಿನ ಮಿತಿಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ. ಬದಲಿಗೆ ಅದನ್ನು ಜಿಎಸ್ಟಿಗೆಸೇರಿಸುವುದಷ್ಟೇ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿದ್ದಂತಿಲ್ಲ.
ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ ಆಗಿದೆ. ರಾಜ್ಯಗಳ ಹಿತಾಸಕ್ತಿ,ಸ್ಥಳೀಯ ಅಗತ್ಯಗಳು ಆ ಪಕ್ಷಗಳಿಗೆ ಲೆಕ್ಕಕ್ಕೇ ಇಲ್ಲ. ಪೆಟ್ರೋಲ್ ಅನ್ನು ಜಿಎಸ್ಟಿಗೆಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್, ಬಿಜೆಪಿಗಳೆರಡೂಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಮಾಜಿಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸುವ ಈ ಎರಡೂ ರಾಷ್ಟ್ರೀಯ ಪಕ್ಷಗಳಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಈ ಸಂಬಂಧಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದುಹೇಳಿದ್ದಾರೆ.