ಚಿಕ್ಕಮಗಳೂರು: ಮದ್ಯದಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕ್ಯಾಷಿಯರ್ ಮತ್ತು ಯುವಕರ ನಡುವೆ ಗಲಾಟೆ ನಡೆದು ಬಡಿದಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಆಶ್ರಯ ಯೋಜನೆ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ಯುವಕರ ತಂಡ ಕೈಯಲ್ಲಿ ದೊಣ್ಣೆ ಹಿಡಿದು ಓಡಾಡಿದ್ದಾರೆ. ಬಡಾವಣೆಯಲ್ಲಿ ಆತಂಕದ ವಾತವರಣ ಸೃಷ್ಟಿಯಾಗಿತ್ತು. ದೊಣ್ಣೆ ಹಿಡುದ ಬೈಕ್‌ನಲ್ಲಿ ಓಡಾಡಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಘಟನೆ ಸಂಬಂಧ 10ಕ್ಕೂ ಹೆಚ್ಚು ಜನರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಕೆಲವರನ್ನು ಬಂಧಿಸಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವಿಕ್ರಮ್ ಅಮಟೆ ಸುದ್ದಿಗಾರರೊಂದಿಗೆ ಮಾತನಾಡಿ, ಮದ್ಯದಂಗಡಿಯಲ್ಲಿ ಹಣ ನೀಡುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು, ಬಾರ್ ಕ್ಯಾಷಿಯರ್ ಮತ್ತು ಯುವಕರ ನಡುವೆ ಗಲಾಟೆಯಾಗಿದೆ. ಘಟನೆಯಲ್ಲಿ ಗಾಯ ಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Fadnavis; ತಾಳ್ಮೆ, ನಾಯಕತ್ವಕ್ಕೆ ನಿಷ್ಠ ಕುಶಾಗ್ರಮತಿಗೆ ಮತ್ತೆ ಹುದ್ದೆ ಒಲಿಯಿತು