ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಸುಧಾಕರ್ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಎಸ್ಎಸ್ಎಲ್ ಸಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದ್ದರು. ಆದರೆ ಇದಾದ ಬಳಿಕ ಎಸ್ಎಸ್ಎಲ್ ಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲವೆಂದು ಕೆ. ಸುಧಾಕರ್ ಹೇಳಿದ್ದರು.
ಇದನ್ನೂ ಓದಿ:ಉಡುಪಿ: ಮಕ್ಕಳ ಐಸಿಯು ನಿರ್ಮಾಣಕ್ಕೆ ನಿರ್ಣಯ : ಸಚಿವ ಬಸವರಾಜ ಬೊಮ್ಮಾಯಿ
ಅದಲ್ಲದೆ ಮಕ್ಕಳ ಆರೋಗ್ಯ ಮುಖ್ಯ ಎಂದು ಹೇಳಿ ಶಾಲಾರಂಭಕ್ಕೂ ಪರೋಕ್ಷವಾಗಿ ಸುಧಾಕರ್ ವಿರೋಧ ವ್ಯಕ್ತಪಡಿಸಿದ್ದರು.
ಸದ್ಯ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಎಸ್ಎಲ್ ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಎಲ್ಲವನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.