Advertisement
ಕಾಂಗ್ರೆಸ್ ಮುಖಂಡ ಎ. ಪಂಚಾಕ್ಷರಿ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಸುಮಾರು 14 ವರ್ಷಗಳಿಂದ ಬೀಡುಬಿಟ್ಟಿರುವ ಕಾರ್ಯದರ್ಶಿ ಅಶ್ವತ್ಥಪ್ಪ ಹಾಗೂ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮತ್ತು ನರೇಗಾ ತಾಂತ್ರಿಕ ಸಿಬ್ಬಂದಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
Related Articles
Advertisement
ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ವರ್ಗಾವಣೆಯನ್ನು ಮಾಡಲು ಸಭೆ ನಡೆಸುತ್ತಿದ್ದೇನೆ ತಮ್ಮ ಬಗ್ಗೆ ಯಾರು ಮಾತನಾಡಿಲ್ಲ ಎಂದು ಎ.ಪಂಚಾಕ್ಷರಿರೆಡ್ಡಿ ಹೇಳಿದರಲ್ಲದೆ ಒಂದೇ ಕಾಲುವೆಯನ್ನು ಮೂರು ಬಾರಿ ಕೆಲಸ ಮಾಡಿ ಬಿಲ್ಲು ಮಾಡಿಕೊಳ್ಳಲಾಗಿದೆ ಅನಧಿಕೃತ ವ್ಯಕ್ತಿಗಳಿಗೆ ಗ್ರಾಮ ಪಂಚಾಯಿತಿಯಲ್ಲಿ ಏನು ಕೆಲಸ ಆಕ್ರೋಶ ವ್ಯಕ್ತಪಡಿಸಿದರು ಇದೇ ವೇಳೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಎ.ಪಂಚಾಕ್ಷರಿರೆಡ್ಡಿ ಅವರ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು ಕೂಡಲೇ ಎಚ್ಚೆತ್ತುಕೊಂಡ ಗ್ರಾಮದ ಹಿರಿಯರು ಎರಡು ಕಡೆಯ ಗುಂಪಿನವರಿಗೆ ಸಮಾಧಾನಪಡಿಸಿ ಇಲ್ಲಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ಆಪರೇಟರ್ ವಿರುದ್ಧ ಹೋರಾಟ ನಡೆಯುತ್ತಿದೆ ಯಾರ ವಿರುದ್ಧವೂ ಅಲ್ಲ ಎಂದು ಸ್ಪಷ್ಟಪಡಿಸಿ ಗಲಾಟೆಯನ್ನು ಶಮನಗೊಳಿಸಿದರು.
ಗ್ರಾಮ ಪಂಚಾಯತಿಯ ಮುಂದೆ ಪ್ರತಿಭಟನೆ ನಡೆಯುತ್ತಿರುವ ಮಾಹಿತಿಯನ್ನು ಅರಿತ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರವಾಣಿಯ ಮೂಲಕ ಸಂಪರ್ಕ ಮಾಡಿ ಪ್ರತಿಭಟನಕಾರರ ರೊಂದಿಗೆ ಮಾತನಾಡಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿಯನ್ನು ಮತ್ತು ನರೇಗಾ ತಾಂತ್ರಿಕ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನಾ ಸಭೆಯನ್ನು ವಾಪಸ್ಸು ಪಡೆಯಲಾಯಿತು.
ಪ್ರತಿಭಟನೆಯಲ್ಲಿ ಜಗದೀಶರೆಡ್ಡಿ, ಜ್ಞಾನೇಶ್, ಸ್ವರೂಪ್‍ರೆಡ್ಡಿ ಅನಿತಾ ಮುನಿಯಪ್ಪ ಮತ್ತಿತರರು ಭಾಗವಹಿಸಿದರು, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಿಡಿಓ ಪವಿತ್ರಾ ಹಾಗೂ ಗ್ರಾಪಂ ಕಾರ್ಯದರ್ಶಿ ಅಶ್ವತ್ಥಪ್ಪ ಉಪಸ್ಥಿತರಿದ್ದರು.