ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ.
75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫೋಟೋವನ್ನು ಹಾಕಲಾಗಿತ್ತು. ಈ ವೇಳೆ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಇನ್ನೊಂದು ಗುಂಪು ಹೊರಟಿದೆ. ಈ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ಉಂಟಾಗಿದೆ.
ಇದನ್ನೂ ಓದಿ: ನಾಲ್ಕು ದಿನಗಳಲ್ಲಿ ಆಮಿರ್ ಚಿತ್ರ ಲಾಲ್ ಸಿಂಗ್ ಛಡ್ಡಾ ಗಳಿಸಿದ್ದೆಷ್ಟು?
ಎರಡು ಕೋಮಿನ ನಡುವೆ ಗಲಾಟೆ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಸಾವರ್ಕರ್ ಫೋಟೋ ತೆರವು ಮಾಡಿ ಎರಡು ಕೋಮಿನವರಿಗೆ ಶಾಂತವಾಗಿರಲು ಸೂಚಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಸಾವರ್ಕರ್ ಫೋಟೋ ತೆರವು ಮಾಡಿದಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ಮತ್ತೊಂದು ಗುಂಪು ನುಗ್ಗಲು ಯತ್ನಿಸಿದೆ. ಕೂಡಲೇ ಪೊಲೀಸರು ಪರಿಸ್ಥಿತಿ ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರ ವ್ಯಾಪ್ತಿ ಹಾಗೂ ಭದ್ರಾವತಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳ ಕಾಲ ಸೆಕ್ಷನ್ 144 ನಿಷೇದಾಜ್ಞೆಜಾರಿ ಜಾರಿಗೊಳಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.