ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಾಯಿ ಬೊಗಳಿದ್ದಕ್ಕೆ ಎರಡು ತಂಡಗಳ ನಡುವೆ ನಡೆದ ಘರ್ಷಣೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಬಲ್ಲಿಯಾ ನಿವಾಸಿಯಾದ ಲಾಲ್ ಮುನಿ (50 ವರ್ಷ) ಮೃತ ದುರ್ದೈವಿ.
ಪ್ರಕರಣದ ಕುರಿತು ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗಾ ಪ್ರಸಾದ್ ತಿವಾರಿ ಕೇವಲ ನಾಯಿ ಬೊಗಳಿದ ವಿಚಾರಕ್ಕೆ ಬಲ್ಲಿಯಾದಲ್ಲಿರುವ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ ಇದರಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಇತರ ಐವರು ಗಂಭೀರ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಮುನಿ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಾವು ಶಿವ ಸಾಗರ್ ಬಿಂದ್ ಮತ್ತು ಅವರ ಮಗ ಅಜಿತ್ ಅವರನ್ನು ಬಂಧಿಸಿದ್ದೇವೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.
Related Articles
ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಸಾರ್ವಜನಿಕರೆದುರು ಪಾನಮತ್ತನಿಂದ ಮೂತ್ರ ವಿಸರ್ಜನೆ