ಪಶ್ಚಿಮ ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪರಿಣಾಮ ಕನಿಷ್ಠ 20 ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ರೆಜಿನಗರ ಪ್ರದೇಶದಲ್ಲಿ ನಡೆದಿದೆ.
ಬುಧವಾರ ರಾಮನವಮಿ ಆಚರಣೆಯ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಲಾಗಿತ್ತು ಈ ವೇಳೆ ಕಿಡಿಗೇಡಿಗಳು ಮೆರವಣಿಗೆ ನಡೆಸುತಿದ್ದವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮನೆಯೊಂದರ ಮೇಲ್ಛಾವಣಿಯಿಂದ ಮೆರವಣಿಗೆ ನಡೆಸುತ್ತಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದು ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಸದ್ಯ ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ರಾಮನವಮಿ ಸಂದರ್ಭದಲ್ಲಿ ಸಂಭವನೀಯ ಹಿಂಸಾಚಾರದ ಆತಂಕವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೋಕಸಭೆ ಚುನಾವಣೆಯನ್ನು “ಧ್ರುವೀಕರಣಗೊಳಿಸಲು ಬಿಜೆಪಿ ಅಶಾಂತಿಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದರು, ಮುರ್ಷಿದಾಬಾದ್‌ನಲ್ಲಿ ಯಾವುದೇ ಹಿಂಸಾಚಾರ ಸಂಭವಿಸಿದಲ್ಲಿ ಚುನಾವಣಾ ಆಯೋಗವು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದರು.
ಇದನ್ನೂ ಓದಿ: Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು