Advertisement

ದೆಹಲಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ಕಿಡ್ನಾಪ್ &ಗ್ಯಾಂಗ್ ರೇಪ್

06:35 PM Jul 15, 2022 | Team Udayavani |

ನವದೆಹಲಿ: ದಕ್ಷಿಣ ದೆಹಲಿಯ ವಸಂತ ವಿಹಾರ್‌ನ ಮಾರುಕಟ್ಟೆಯಿಂದ 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿ ಆಕೆಯ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಜುಲೈ 6 ರಂದು ನೈರುತ್ಯ ದೆಹಲಿಯ ಮಹಿಪಾಲ್‌ಪುರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಈ ಘಟನೆ ನಡೆದಿದ್ದು, ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳೆಲ್ಲ 20ರ ಆಸುಪಾಸಿನವರಾಗಿದ್ದು, ಆರೋಪಿಗೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

“ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯಿದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವಸಂತ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next