ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೆಹಲಿಯ ಹಲವಾರು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿದ್ದು ದೆಹಲಿ ಪೋಲೀಸರ ನಿದ್ದೆಗೆಡಿಸಿದೆ ಈ ನಡುವೆ ಬಾಂಬ್ ಬೆದರಿಕೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಹನ್ನೆರಡನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿಯ ವಿಚಾರಣೆ ವೇಳೆ ಈತ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದಾಗಿಯೂ ಒಪ್ಪಿಕೊಂಡಿದ್ದಾನೆ, ಜೊತೆಗೆ ವಿಚಾರಣೆ ಸಂದರ್ಭ ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾನೆ, ಪದೇ ಪದೇ ನಡೆಯುತ್ತಿರುವ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ತಾನು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಹೇಳಿಕೊಂಡಿದ್ದಾನೆ. ಇಟಾ ಎಷ್ಟು ಚಾಲಾಕಿ ಹುಡುಗನೆಂದರೆ ಬಾಂಬ್ ಬೆದರಿಕೆ ಹಾಕುವಾಗ ತನ್ನ ಶಾಲೆಯೊಂದನ್ನು ಬಿಟ್ಟು ಉಳಿದ ಶಾಲೆಗಳಿಗೆ ಇ ಮೇಲ್ ಮೂಲಕ ಬೆದರಿಕೆ ಹಾಕುತ್ತಿದ್ದ ಎಂದು ಹೇಳಿಕೊಂಡಿದ್ದಾನೆ.
ಸದ್ಯ ದಕ್ಷಿಣ ದೆಹಲಿ ಪೊಲೀಸರ ವಶದಲ್ಲಿರುವ ವಿದ್ಯಾರ್ಥಿಯನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಅಂಕಿತ್ ಚೌಹಾಣ್ ಕಳೆದ ಕೆಲ ತಿಂಗಳುಗಳಿಂದ ದೆಹಲಿಯ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಿದ್ದು ಈ ನಿಟ್ಟಿನಲ್ಲಿ ಕಾರ್ಯಾಚರಣೆಗೆ ಇಳಿದ ತಂಡ ನಗರದ ಶಾಲೆಯೊಂದರ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಆತನನ್ನು ವಿಚಾರಣೆ ನಡೆಸಿದ ವೇಳೆ ತಾನು ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ, ಜೊತೆಗೆ ಈ ಹಿಂದೆಯೂ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಗಳನ್ನು ಹಾಕಿರುವುದಾಗಿ ವಿದ್ಯಾರ್ಥಿ ಒಪ್ಪಿಕೊಂಡಿದ್ದು ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್