ಚೆನ್ನೈ: ಸರ್ಕಾರಿ ಅನುದಾನಿತ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಚೂರಿಯಿಂದ ಇರಿದುಕೊಂಡು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿ ನಡೆದಿದೆ. ತಮಗೆ ಸೂಕ್ತ ಸಮಯದಲ್ಲಿ ಮಾಹಿತಿ ನೀಡಿಲ್ಲ ಎಂದು ಸಂತ್ರಸ್ತ ವಿದ್ಯಾರ್ಥಿಯ ಸಂಬಂಧಿಗಳು ಆರೋಪಿ, ಪ್ರತಿಭಟನೆ ನಡೆಸಿದ್ದಾರೆ.
ಇ
ದನ್ನೂ ಓದಿ:ಉಡುಪಿ : ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ ಎಂ.ಸುಧಾಕರ್ ರಾವ್ ನಿಧನ
ಥೆಕ್ಕೂಲುರ್ ನಿವಾಸಿಯಾಗಿರುವ ಯುವಕ ತನ್ನ ಗೆಳೆಯರ ಜೊತೆಗೂಡಿ ಊಟೋಪಚಾರ ಮುಗಿಸಿದ್ದ. ನಂತರ ನಿದ್ದೆ ಮಾಡಲು ತೆರಳಿದ್ದ. ಮರುದಿನ ಆತನ ಶವ ಪತ್ತೆಯಾಗಿತ್ತು.
ಆಕ್ರೋಶಗೊಂಡ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ತಿರುಥಣಿ ರಸ್ತೆಯನ್ನು ಬಂದ್ ಮಾಡಿ, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಸರ್ಕಾರಿ ಕಾಲೇಜಿಗೆ ಸಿಬಿ, ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿತ್ತು ಎಂದು ವರದಿ ತಿಳಿಸಿದೆ.