ಕಟಪಾಡಿ: ಕಾಪು ಕ್ಷೇತ್ರ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಕ್ಲೀನ್ ಇಂಡಿಯಾ ಅಭಿಯಾನದ ಅಂಗವಾಗಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್.ಡಿ.ಪಿ.ಆರ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್ ಉಡುಪಿ, ಕೋಟೆ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ. ಪಂಚಾಯತ್ ರಾಜ್ ವ್ಯವಸ್ಥೆಯ ತಳಮಟ್ಟದ ನೌಕರರಾದ ಗ್ರಾ.ಪಂ. ನೌಕರರಿಂದ ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಕಡಲ ಕಿನಾರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ರವಿವಾರ ಹಸಿರು ನಿಶಾನೆ ತೋರಿದರು.
ಅನಂತರ ಮಾತನಾಡುತ್ತಾ, ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯದ ದುಷ್ಪರಿಣಾಮವಾಗಿ ಜಾನುವಾರುಗಳು, ಜಲಚರಗಳು ಸಂಕಷ್ಟಕ್ಕೀಡಾಗುತ್ತಿದೆ. ಪ್ರಕೃತಿಯ ವಿನಾಶವೂ ಸಂಭವಿಸುತ್ತಿದ್ದು, ಸಾರ್ವಜನಿಕರು ಸ್ವಯಂ ಸ್ಪೂರ್ತಿಯಿಂದ ಸ್ವಚ್ಛತೆಯ ಬಗ್ಗೆ ಜಾಗ್ರತರಾಗಬೇಕಿದೆ ಎಂದರು.
ಈ ಸಂದರ್ಭ ಉಡುಪಿ ಜಿ ಪಂ. ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಕೋಟೆ ಗ್ರಾ.ಪಂ. ಅಧ್ಯಕ್ಷ ಕಿಶೋರ್ ಅಂಬಾಡಿ, ಎನ್ಎಲ್ಆರ್ಎಂ ಸಂಯೋಜಕ ಪಾಂಡುರಂಗ, ರೋಟರಿ ಮಾಜಿ ಜಿಲ್ಲಾ ಗವರ್ನರ್, ಉದ್ಯಮಿ ಕೆ. ಸತ್ಯೇಂದ್ರ ಪೈ, ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯ ಕಾರ್ಯದರ್ಶಿ ಪದ್ಮನಾಭ ಆರ್ ಕುಲಾಲ್, ಪಿಡಿಒ ಶ್ರುತಿ ಕಾಂಚನ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್.ಡಿ.ಪಿ.ಆರ್ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಪ್ರಶಾಂತ್ ತೆಂಕ ನಿಡಿಯೂರು, ಕಾರ್ಯದರ್ಶಿ ಅಭಿಷೇಕ್, ಖಜಾಂಚಿ ಸಚಿನ್ ಪೂಜಾರಿ ಮಣಿಪುರ, ಕೋಟೆ ಗ್ರಾ.ಪಂ. ಸದಸ್ಯರು, ಸಂಜೀವಿನಿ ಒಕ್ಕೂಟ ಸಹಿತ ವಿವಿಧ ಸಂಘಟನೆಗಳು ಮಟ್ಟು ಕಡಲ ಕಿನಾರೆಯ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.