ಬೆಂಗಳೂರು: ಸ್ವಚ್ಛತಾ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಖಾಯಂ ಕಾರ್ಮಿಕರನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿರಿಸಿ ಜು. 1ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಫಾಯಿ ಕರ್ಮಚಾರಿ ಪೌರ ಕಾರ್ಮಿಕರ ಸಂಘಟನೆಗಳ ಜಂಟಿ ಹೋರಾಟ ಸಮಿತಿ ತಿಳಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯಾಧ್ಯಕ್ಷ ಮೈಸೂರು ನಾರಾಯಣ ಅವರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರ ಗುತ್ತಿಗೆ ನೀಡಿರುವುದರಿಂದ ಕಾರ್ಮಿಕರ ಮೇಲೆ ವಿವಿಧ ರೀತಿಯ ಶೋಷಣೆಯಾಗುತ್ತಿದೆ. ಇದನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.