Advertisement
ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು, ಅವುಗಳು ಸ್ವಚ್ಛವಾಗಿರು ವುದು ಅತೀ ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಚಿಂತನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.
ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾ ದ್ಯಂತ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ತಿಳಿಸಿದ್ದಾರೆ.
Related Articles
ದೇವಸ್ಥಾನದ ಸುತ್ತಮುತ್ತಲಿನ ಗಿಡ ಗಂಟಿ ತೆರವು. , ಮಂದಿರ, ಮಸೀದಿ, ಚರ್ಚ್‌ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ. ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛತೆ. ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸುವುದು. ಸಾರ್ವಜನಿಕ ಶೌಚಾಲಯ, ನಗರಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು. ಶ್ರದ್ಧಾ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು. ಜಾತ್ರೆ, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು. ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ. ತ್ಯಾಜ್ಯಗಳನ್ನು ಬಿಸಾಡಲು ಕಸದ ಬುಟ್ಟಿ ಇಟ್ಟು ಸೂಚನ ಫಲಕ ಅಳವಡಿಕೆ.
Advertisement