ಶಿವಮೊಗ್ಗ: ಭದ್ರಾವತಿ ತಾಲೂಕು ಹಾತಿಕಟ್ಟೆ ಗ್ರಾಮದಲ್ಲಿ ಹಾದು ಹೋಗಿರುವ ಬಸಾಪುರ ಡಿಸ್ಟಿÅಬ್ಯೂಟರ್ 27ರ ಬಲ ನಾಲೆಯಲ್ಲಿ ತುಂಬಿರುವ ಹೂಳು ತೆಗೆಯುವುದು ಹಾಗೂ ಗಿಡಗಂಟಿ ಕಡಿದು ಸ್ವತ್ಛಗೊಳಿಸುವ ಕಾರ್ಯವನ್ನು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ನಮ್ಮ ಇಲಾಖೆಗೆ ಬಹಳಷ್ಟು ಅನುಕೂಲವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಉದ್ಯೋಗದ ಖಾತ್ರಿ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಬರುವ ಇನ್ನಷ್ಟು ಕಾಮಗಾರಿಗಳನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದ್ದು, ಸಂಬಂ ಧಿಸಿದ ಅಧಿ ಕಾರಿಗಳು ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.
ನಂತರ ಭದ್ರಾವತಿ ತಾಲೂಕಿನ ಕಾಗೆಕೊಡಮಗ್ಗಿ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿ ರಾಘವೇಂದ್ರ, ನೀರಾವರಿ ಇಲಾಖೆ ಸಹಾಯಕ ಅಭಿಯಂತರರಾದ ಉಮೇಶ್, ನೀರು ಬಳಕೆದಾರರ ಸಂಘದ ಕಾರ್ಯದರ್ಶಿ ರವಿ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.