Advertisement
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಪ್ರಕರಣಕ್ಕೆ ತಾಂತ್ರಿಕವಾಗಿ ಕಾರಣವಾಗಿರುವ ಸಮಸ್ಯೆ ಬಗ್ಗೆ ತಿಳಿಯಬೇಕಿದೆ ಎಂದರು.
Related Articles
Advertisement
ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣದ ಕುರಿತು ಎರಡು ರಾಜ್ಯದವರ ಭಾವನೆಯನ್ನು ನ್ಯಾಯಾಲಯದಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದರು.
ತುಂಗಭದ್ರಾ ಮಂಡಳಿಯಲ್ಲಿ ಎರಡು ರಾಜ್ಯಗಳ ಚರ್ಚೆಯೂ ಆಗಬೇಕಾಗುತ್ತದೆ. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ನವಲಿ ಬಳಿ ತುಂಗಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಒತ್ತು ಕೊಡುವ ಕುರಿತು ಡಿಸಿಎಂ ಶಿವಕುಮಾರ ಜೊತೆ ಮಾತನಾಡುತ್ತೇನೆ ಎಂದರು.
ನಿರ್ವಹಣೆ ಕೊರತೆಯಿಂದ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಲಿಂಕ್ ಕಟ್ ಆಗಿದೆ ಎಂದು ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಏನಾಗಿದೆ ಎಂದು ನೋಡೋಣ. ಘಟನೆ ಏಕಾಯಿತು ಎಂದು ಅರ್ಥ ಮಾಡಿಕೊಳ್ಳುವ ಕೆಲಸ ಆಗಬೇಕಿದೆ ಎಂದರು.
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಘಟನೆಯಿಂದ ಇತರೆ ಜಲಾಶಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಈ ವಿಷಯದಲ್ಲಿ ನಮ್ಮ ಸರ್ಕಾರ ಅಧಿಕಾರಿಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದರು.
ಡಿಕೆಶಿ ಭೇಟಿ ಸಾಧ್ಯತೆ
ತುಂಗಭದ್ರಾ ಡ್ಯಾಮ್ ನ 19ನೇ ಗೇಟ್ ಕಟ್ಟಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದ್ದು ಈ ಕುರಿತಂತೆ ಪರಿಶೀಲನೆ ನಡೆಸಲು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಡ್ಯಾಮ್ ಸ್ಥಳಕ್ಕೆ ಆಗಮಿಸುವ ಸಾಧ್ಯತೆ ಇದೆ.